ಕನ್ನಡದಲ್ಲಿ ಮೋದಿ ಟ್ವೀಟ್: ಭಾರೀ ಮೆಚ್ಚುಗೆ

ಬೆಂಗಳೂರು: ಕರ್ನಾಟಕ ರಾಜ್ಯಕ್ಕೆ ಹೋಗುತ್ತಿರುವೆ, ಬೆಂಗಳೂರು, ಮೈಸೂರು ಕಾರ್ಯಕ್ರಮದಲ್ಲಿ ಭಾಗವಹಿಸುವೆ ಎಂದು ಪ್ರಧಾನಿ ಮೋದಿ ಅವರು ಕನ್ನಡದಲ್ಲೇ  ಟ್ವೀಟ್ ಮಾಡಿದ್ದಾರೆ.

ಕರ್ನಾಟಕ ಪ್ರವಾಸ ಸಂದರ್ಭದಲ್ಲಿ ಕಾರ್ಯಕ್ರಮಗಳ ಬಗ್ಗೆ ಟ್ವೀಟ್‍ನಲ್ಲಿ ವಿವರಿಸಲಾಗಿದ್ದು, ಮೋದಿ‌ ಅವರ‌ ಈ ಕನ್ನಡ ಟ್ವೀಟ್‍ಗೆ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದೆ.

ಬೆಂಗಳೂರಿನ ಕಾರ್ಯಕ್ರಮದಲ್ಲಿ 27,000 ಕೋಟಿ ರೂ. ಮೌಲ್ಯದ ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಇಲ್ಲವೆ ಶಂಕುಸ್ಥಾಪನೆ ನೆರವೇರಿಸಲಿದ್ದೇನೆ.

ಈ ಕಾಮಗಾರಿಗಳು ವಿವಿಧ ಕ್ಷೇತ್ರಗಳಿಗೆ ಸೇರಿದ್ದು ಬೆಂಗಳೂರು ಹಾಗೂ ಸುತ್ತಮುತ್ತಲಿನ ಜನರ ಸುಗಮ ಜೀವನಕ್ಕೆ ನೆರವಾಗಲಿದೆ ಎಂದು  ಹೇಳಿದ್ದಾರೆ. ಸಂಜೆ 5.30ರ ವೇಳೆಗೆ ಮೈಸೂರು ತಲುಪುವೆ. ಅಲ್ಲಿಯೂ ಪ್ರಮುಖ ಅಭಿವೃದ್ಧಿ ಕಾರ್ಯಗಳ ಉದ್ಘಾಟನೆ ಇಲ್ಲವೆ ಶಿಲಾನ್ಯಾಸ ನೆರವೇರಿಸುವೆ. ಸುತ್ತೂರು ಮಠದ ಕಾರ್ಯಕ್ರಮದಲ್ಲಿಯೂ ಭಾಗಿಯಾಗುವೆ. ಮಂಗಳವಾರ ಬೆಳಗ್ಗೆ, ಮೈಸೂರಿನಲ್ಲಿ ಯೋಗ ದಿನದ ಕಾರ್ಯಕ್ರಮದಲ್ಲೂ‌ ಪಾಲ್ಗೊಳ್ಳುವೆ‌ ಎಂದು ಮೋದಿ ಟ್ವೀಟ್ ನಲ್ಲಿ ತಿಳಿಸಿದ್ದಾರೆ.