ಶೇ.40ರಷ್ಟು ಕಮಿಷನ್ ಹಗರಣದ ತನಿಖೆ ಯಾವಾಗ -ಪ್ರಧಾನಿಗೆ ಸಿದ್ದು ಪ್ರಶ್ನೆ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ಕರ್ನಾಟಕ ಪ್ರವಾಸ ಕೈಗೊಂಡಿರುವ ಹಿನ್ನೆಲೆಯಲ್ಲಿ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಹಲವು ಪ್ರಶ್ನೆಗಳನ್ನು ಕೇಳಿದ್ದಾರೆ.

ಶೇ.40ರಷ್ಟು ಕಮಿಷನ್ ಹಗರಣವನ್ನು ಯಾವಾಗ ತನಿಖೆ ಮಾಡಿಸುತ್ತೀರಾ ಪ್ರಧಾನಿಯವರೇ ಇದಕ್ಕೆ ಉತ್ತರಿಸಿ ಎಂದು ಒತ್ತಾಯಿಸಿದ್ದಾರೆ.

ಆನ್ಸರ್‍ ಮಾಡಿ ಮೋದಿ ಎಂಬ ಹ್ಯಾಶ್ ಟ್ಯಾಗ್ ಬಳಕೆ ಮಾಡಿ ಸರಣಿ ಟ್ವೀಟ್ ಮಾಡಿರುವ ಸಿದ್ದರಾಮಯ್ಯ ಗುತ್ತಿಗೆದಾರರು ಶೇ.40ರಷ್ಟು ಕಮಿಷನ್ ಪಡೆಯಲಾಗುತ್ತಿದೆ ಎಂದು ರಾಜ್ಯ ಸರ್ಕಾರದ ವಿರುದ್ಧ ಆರೋಪ ಮಾಡಿದ್ದಾರೆ.

ನಾನು ತಿನ್ನಲ್ಲ, ಬೇರೆಯವರಿಗೆ ತಿನ್ನಲು ಬಿಡಲ್ಲ ಎಂದು‌ ಹೇಳಿದ್ದ ತಾವು ಇದನ್ನು ಯಾವಾಗ ತನಿಖೆ ಮಾಡಿಸುತ್ತಿರಾ‌ ಎಂದು ಪ್ರಶ್ನಿಸಿದ್ದಾರೆ.

ಬೆಂಗಳೂರು ಉಪನಗರ ಯೋಜನೆ ಮೂಲ ವರದಿ ಪ್ರಕಾರ ಯೋಜನಾ ಗಾತ್ರದ ಶೇ.20ರಷ್ಟನ್ನು ಕೇಂದ್ರ ಸರ್ಕಾರ ಭರಿಸಬೇಕು. ಯಾವಾಗ ಭರಿಸಲಾಗುತ್ತದೆ.

ಕೇಂದ್ರ ಸರ್ಕಾರ ರೈತರ ಪ್ರತಿಭಟನೆಗೆ ಮಣಿದು ಕೃಷಿ ಕಾನೂನುಗಳನ್ನು ಹಿಂಪಡೆದಿದೆ. ಆದರೆ ರಾಜ್ಯದಲ್ಲಿ ಈವರೆಗೂ ಕಾನೂನುಗಳು ರದ್ದು

ಗೊಂಡಿಲ್ಲ. ರಾಜ್ಯ ಸರ್ಕಾರ ನಿಮ್ಮ ಸೂಚನೆಯಂತೆ ನಡೆದಿದೆಯೇ ಎಂದು ಪ್ರಶ್ನಿಸಿದ್ದಾರೆ.

ಮೇಕೆದಾಟು ಯೋಜನೆಗೆ ಅನುಮತಿ ನೀಡಲು ವಿಳಂಬ ಯಾಕೆ, ತಮಿಳುನಾಡಿನ ಒತ್ತಡವೇ, ಕೇಂದ್ರ ಸರ್ಕಾರದ ಪೂರ್ವಾಗ್ರಹ ಕಾರಣವೇ.

ರಾಜ್ಯಗಳ ಮೇಲೆ ಹಿಂದಿ ಹೇರಿಕೆ ಕುರಿತು ನಿಮ್ಮ ನಿಲುವೇನು ಎಂದುಪ್ರಶ್ನಿಸಿದ್ದು, ಹಣಕಾಸು ವಿಚಾರದಲ್ಲಿ ರಾಜ್ಯಕ್ಕೆ ತಾರತಮ್ಯವಾಗಿರುವುದನ್ನು ಎಳೆ ಎಳೆಯಾಗಿ ಬಿಡಿಸಿಟ್ಟಿದ್ದಾರೆ.

ಐದು ವರ್ಷಗಳ ಹಿಂದೆ 2017ರ ಅಕ್ಟೋಬರ್ 4ರಂದು ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರು ನಮ್ಮ ಸರ್ಕಾರದ ಹೆಮ್ಮೆಯ ಯೋಜನೆಯಾದ ಬಾಬಾಸಾಹೇಬ್ ಡಾ.ಬಿ. ಆರ್.ಅಂಬೇಡ್ಕರ್ ಸ್ಕೂಲ್ ಆಫ್ ಎಕನಾಮಿಕ್ಸ್ ಉದ್ಘಾಟಿಸಿದ್ದು ನಾನು ಮುಖ್ಯಮಂತ್ರಿಯಾಗಿದ್ದ ಕಾಲದ ಮಧುರ ಮತ್ತು ಸಾರ್ಥಕ ನೆನಪುಗಳು ಎಂದಿದ್ದಾರೆ.

ವಿಶ್ವಕಂಡ ಅಪ್ರತಿಮ ಆರ್ಥಿಕ ತಜ್ಞ ಡಾ.ಬಿ.ಆರ್. ಅಂಬೇಡ್ಕರ್ ಅವರ 125ನೇ ಹುಟ್ಟು ಹಬ್ಬದ ಸಂದರ್ಭದಲ್ಲಿ ಅವರ ನೆನಪಿಗೆ ಅರ್ಥಪೂರ್ಣವಾದ ಸ್ಮಾರಕರೂಪದಲ್ಲಿ ಯೋಜನೆಯೊಂದನ್ನು ರೂಪಿಸಬೇಕೆಂಬ ನಮ್ಮ ಸರ್ಕಾರದ ಕನಸು ರೂಪುಗೊಂಡದ್ದು ಬಾಬಾಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಸ್ಕೂಲ್ ಆಫ್ ಎಕಾನಾಮಿಕ್ಸ್ ಎಂದಿದ್ದಾರೆ.

ಇದಕ್ಕಾಗಿ 2017ರಲ್ಲಿಯೇ 43.45 ಎಕರೆ ಜಮೀನು ಮತ್ತು ಹೊಸ ಕಟ್ಟಡ ಸಹಿತ ಮೂಲ ಸೌಕರ್ಯ ನಿರ್ಮಾಣಕ್ಕೆ 350 ಕೋಟಿ ರೂಪಾಯಿ ಮಂಜೂರು ಮಾಡಿದ್ದು ನಮ್ಮ ಸರ್ಕಾರ. ನಮ್ಮ ಬದ್ಧತೆಯಿಂದ ಈ ಯೋಜನೆಯನ್ನು ಸಾಕಾರಗೊಂಡಿತ್ತು. ಕಾಲೇಜಿನ ಕಟ್ಟಡಕ್ಕೆ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಶಂಕು ಸ್ಥಾಪನೆ ನೇರವೇರಿಸಿದರು.

ಈ ಕಟ್ಟಡವನ್ನು ಆರು ತಿಂಗಳಲ್ಲಿ ಪೂರ್ಣಗೊಳಿಸಿದ್ದು ನಮ್ಮ ಸರ್ಕಾರದ ಹೆಮ್ಮೆಯ ಸಾಧನೆ‌ ಎಂದು ತಿಳಿಸಿದ್ದಾರೆ.

ಜ್ಞಾನಭಾರತಿ ಕ್ಯಾಂಪಸ್ ನಲ್ಲಿಯೇ ಇದ್ದ ಕಟ್ಟಡದಲ್ಲಿಯೇ 2017ರ ಜೂನ್ ನಲ್ಲಿ ಬಿಎಸ್ಸಿ ಆನರ್ಸ್, ಎಕಾನಮಿಕ್ಸ್ ತರಗತಿಗಳು ಪ್ರಾರಂಭವಾಗಿತ್ತು.

ಪ್ರಧಾನಿ ನರೇಂದ್ರಮೋದಿ ಅವರು ಇಂದು ಬಾಬಾಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಸ್ಕೂಲ್ ಆಫ್ ಎಕಾನಿಮಿಕ್ಸ್ ನ ನೂತನ ಆವರಣವನ್ನು ಉದ್ಘಾಟಿಸಿದ್ದು ಸಮಾರಂಭಕ್ಕೆ ಶುಭ ಹಾರೈಸುವೆ ಎಂದಿದ್ದಾರೆ.