ಚುನಾವಣೆಯಲ್ಲಿ ಅಡ್ಡ ಮತದಾನ: ಜೆಡಿಎಸ್ ನ ಇಬ್ಬರು ‌ಶಾಸಕರ‌‌ ಉಚ್ಚಾಟನೆ

ಬೆಂಗಳೂರು: ರಾಜ್ಯಸಭೆ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿದ ಕೋಲಾರ ಶಾಸಕ ಕೆ.ಶ್ರೀನಿವಾಸ ಗೌಡ ಹಾಗೂ ಗುಬ್ಬಿ ಶಾಸಕ ಎಸ್.ಆರ್.ಶ್ರೀನಿವಾಸ್ ಅವರನ್ನು ಜೆಡಿಎಸ್ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಉಚ್ಛಾಟನೆ ಮಾಡಲಾಗಿದೆ.

ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ನಡೆದ ಕೋರ್ ಕಮಿಟಿ ಸಭೆಯಲ್ಲಿ ಈ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಕೋರ್ ಕಮಿಟಿ ಅಧ್ಯಕ್ಷ ಬಂಡೆಪ್ಪ ಕಾಶಂಪೂರ್  ತಿಳಿಸಿದರು.

ಸಭೆಯ ನಂತರ ಮಾಧ್ಯಮ ಪ್ರತಿ ನಿಧಿಗಳೊಂದಿಗೆ ಮಾತನಾಡಿದ‌ ಅವರು,
ಪಕ್ಷಾಂತರ ನಿಷೇಧ ಕಾಯ್ದೆ ಅಡಿ ಇಬ್ಬರೂ ಶಾಸಕರನ್ನು ವಿಧಾನಸಭೆ ಸದಸ್ಯತ್ವದಿಂದ ಅನರ್ಹಗೊಳಿಸುವಂತೆ ತಕ್ಷಣವೇ ವಿಧಾನಸಭಾಧ್ಯಕ್ಷರಿಗೆ ದೂರು ನೀಡಲು  ನಿರ್ಣಯ ಕೈಗೊಳ್ಳಲಾಯಿತು ಎಂದು ಹೇಳಿದರು.

ಗುರುವಾರ ಅಥವಾ ಶುಕ್ರವಾರ ವಿಧಾನಸಭಾಧ್ಯಕ್ಷರಿಗೆ ದೂರು ನೀಡುವುದಾಗಿ‌ ಕಾಶಂಪೂರ್ ತಿಳಿಸಿದರು.