ನೂಪುರ್ ಶರ್ಮಾ ಬೆಂಬಲಿತನ ಹತ್ಯೆ: ಸಿದ್ದು ತೀವ್ರ ಖಂಡನೆ

ಬೆಂಗಳೂರು:‌ ರಾಜಾಸ್ಥಾನದ ಉದಯಪುರದಲ್ಲಿ ಬಿಜೆಪಿ ಉಚ್ಛಾಟಿತ ನಾಯಕಿ ನೂಪುರ್ ಶರ್ಮಾ ಬೆಂಬಲಿತನ ಶಿರಚ್ಛೇದ ಪ್ರಕರಣವನ್ನು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ತೀವ್ರವಾಗಿ ಖಂಡಿಸಿದ್ದಾರೆ.

ಈ ಸಂಬಂಧ ಟ್ವೀಟ್ ಮಾಡಿರುವ ಸಿದ್ದು,ಉದಯಪುರದಲ್ಲಿ ಧರ್ಮಾಂಧನೊಬ್ಬ ನಡೆಸಿರುವ ಬರ್ಬರ ಹತ್ಯೆ ಖಂಡನೀಯ.ಹಿಂಸೆ ಪರಿಹಾರವಲ್ಲ,ಉತ್ತರವೂ ಅಲ್ಲ ಎಂದು ಹೇಳಿದ್ದಾರೆ.

ಕುರುಡು ಹಿಂಸೆಗೆ ಬಲಿಯಾದ ವ್ಯಕ್ತಿಯ ಕುಟುಂಬಕ್ಕೆ ನನ್ನ ಸಂತಾಪಗಳು ಎಂದು ಬರೆದಿದ್ದಾರೆ.

ಅಲ್ಲಿನ ಸರ್ಕಾರ ಕಾನೂನು ಕ್ರಮದ ಮೂಲಕ ಕೊಲೆಗಡುಕನಿಗೆ ಅತ್ಯುಗ್ರ ಶಿಕ್ಷೆಯಾಗುವಂತೆ ನೋಡಿಕೊಳ್ಳಬೇಕು ಎಂದು ಸಿದ್ದು ಒತ್ತಾಯಿಸಿದ್ದಾರೆ.