ಮೈಸೂರು: ಸರ್ಕಾರದ ಆಯುಷ್ಮಾನ್ ಭಾರತ್ ಯೋಜನೆಯಲ್ಲಿ ಭ್ರಷ್ಟಾಚಾರ ಆರೋಪ ಬಂದಿರುವ ಹಿನ್ನೆಲೆಯಲ್ಲಿ ಸಿಬಿಐ ತನಿಖೆ ನಡೆಸಬೇಕೆಂದು ಅಖಿಲ ಭಾರತ ಗ್ರಾಹಕ ಪಂಚಾಯತ್ ಮೈಸೂರು ಸಂಘಟನಾ ಕಾರ್ಯದರ್ಶಿ ವಿಕ್ರಂ ಅಯ್ಯಂಗಾರ್ ಆಗ್ರಹಿಸಿದ್ದಾರೆ.
ಈ ಸಂಬಂಧ ಅವರು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು
ಯೋಜನೆಯಲ್ಲಿನ ಭ್ರಷ್ಟಾಚಾರ ಮತ್ತು ಹಗರಣದ ಬಗ್ಗೆ ಸಿಬಿಐ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದ್ದಾರೆ.
ಅಧಿಕಾರಿಗಳ ನಿರಾಸಕ್ತಿ ಮತ್ತು ಹೊಂದಿಕೊಳ್ಳುವ ವ್ಯವಸ್ಥೆ ಯಿಂದಾಗಿ ನಕಲಿ ರೋಗಿಗಳ ದಾಖಲೆಗಳನ್ನು ಸೃಷ್ಟಿಸಲಾಗಿದೆ, ಮತ್ತು ಯೋಜನೆಯಿಂದ ಕೋಟ್ಯಂತರ ರೂಪಾಯಿಗಳನ್ನು ವಸೂಲಿ ಮಾಡುವ ಮೂಲಕ ಭ್ರಷ್ಟಾಚಾರ ಮಾಡಲಾಗುತ್ತಿದೆ ಎಂದು ಅವರು ಆರೋಪಿಸಿದ್ದಾರೆ.

