ಮೈಸೂರು: ಗೋಕಳ್ಳರಿಗೆ ಏಟು ಬಿದ್ದರೆ ಬೊಬ್ಬೆ ಹೊಡೆಯುವ ಕಾಂಗ್ರೆಸ್ ನಾಯಕರು ಈಗ ಯಾವ ಬಿಲದಲ್ಲಿ ಅಡಗಿದ್ದಾರೆ ಎಂದು ಸಂಸದ ಪ್ರತಾಪ್ ಸಿಂಹ ವಾಗ್ದಾಳಿ ನಡೆಸಿದ್ದಾರೆ.
ರಾಜಸ್ತಾನದಲ್ಲಿ ನಡೆದ ಹಿಂದೂ ಟೈಲರ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರು ಮಾಧ್ಯಮಗಳೊಂದಿಗೆ ಪ್ರತಿಕ್ರಿಯಿಸಿದರು.
ಕರ್ನಾಟಕದಲ್ಲೂ ಕಾಂಗ್ರೆಸ್ ಗೆ ಅಧಿಕಾರ ಕೊಟ್ಟರೆ ಇದೇ ಪರಿಸ್ಥಿತಿ ಉಂಟಾಗುತ್ತದೆ. ಇದು ಕರ್ನಾಟಕದ ಜನರಿಗೆ ಎಚ್ಚರಿಕೆ ಗಂಟೆ.
ರಾಜಸ್ಥಾನ ಸರ್ಕಾರದ ಮೇಲೆ ನನಗೆ ವಿಶ್ವಾಸವಿಲ್ಲ. ಹಿಂದುಗಳ ಧ್ವನಿ ಅಡಗಿಸಲು ಈ ಕೃತ್ಯ ನಡೆದಿದೆ. ಕಾಂಗ್ರೆಸ್ ನವರ ಮುಸ್ಲಿಂ ಓಲೈಕೆಯಿಂದ ಈ ರೀತಿ ನಡೆಯುತ್ತಿದೆ ಎಂದು ಆರೋಪಿಸಿದರು.
ಒಳ್ಳೆಯ ಮುಸ್ಲಿಮರು ಯಾಕೆ ಈಗ ಮಾತಾಡ್ತಿಲ್ಲ ಈ ಕೊಲೆ ತಪ್ಪು ಅಂತಾ ಆರೋಪಿಗಳ ವಿರುದ್ಧ ಫತ್ವಾ ಹೊರಡಿಸಲಿ ನೋಡೋಣಾ ಶುಕ್ರವಾರ ಪ್ರಾರ್ಥನೆಯಾದ ನಂತರ ಕಲ್ಲು ತೂರುವಂತೆ ಹೇಳುವುದು ನಿಮ್ಮ ಕೆಲಸವಾ ಎಂದು ಪ್ರತಾಪ್ ಸಿಂಹ ಕಿಡಿಕಾರಿದ್ದಾರೆ.
ಗೋಕಳ್ಳರಿಗೆ ಎರಡೇಟು ಬಿದ್ದರೆ ಬೊಬ್ಬೆ ಹಾಕುವವರು ಈಗ ಎಲ್ಲಿದ್ದಾರೆ ಏನ್ಮಾಡ್ತಿದ್ದಾರೆ ಟ್ವೀಟ್ ಮಾಡಿ ಮನೆಯೊಳಗೆ ಕುಳಿತರೆ ಮುಗೀತಾ ನಿಮ್ಮ ಕೆಲಸ ಎಂದು ಕಾಂಗ್ರೆಸ್ ವಿರುದ್ಧ ಪ್ರತಾಪ್ ಸಿಂಹ ಹರಿಹಾಯ್ದರು.

