ಹುಬ್ಬಳ್ಳಿ: ವಾಸ್ತು ತಜ್ಞ ಚಂದ್ರಶೇಖರ ಗುರೂಜಿ ಅವರ ಕೊಲೆ ಪ್ರಕರಣದ ಆರೋಪಿ ಮಹಾಂತೇಶ ಶಿರೂರ ಐದು ದಿನಗಳ ಹಿಂದೆಯೇ ಗುರೂಜಿ ಕೊಲೆಯ ಸುಳಿವು ನೀಡಿದ್ದ.
ಆತ ತನ್ನ ಫೇಸ್‌ಬುಕ್ ಖಾತೆಯಲ್ಲಿ ಹಾಕಿದ್ದ ಪೋಸ್ಟ್ ಇದು ನಿಜ ಎಂದು ಹೇಳುತ್ತಿದೆ.
ಫೇಸ್‌ಬುಕ್ ನಲ್ಲಿ ಭಗವದ್ಗೀತೆಯ ಶ್ಲೋಕದ ಪೋಸ್ಟ್ ಅನ್ನು ಶೇರ್ ಮಾಡಿರಿವ ಆರೋಪಿ, ಅಧರ್ಮ ತಾಂಡವಾಡುತ್ತಿರುವಾಗ ದುಷ್ಟರನ್ನು ನಾಶ ಮಾಡಲು ಮತ್ತು ಧರ್ಮವನ್ನು ಪುನಃ ಸ್ಥಾಪಿಸಲು ನೀನು ಬರುವುದಾಗಿ ವಚನ ನೀಡಿರುವೆ ಪ್ರಭು. ಇನ್ನು ವಿಳಂಬವೇಕೆ ಪ್ರಭುವೇ ಬೇಗ ಅವತರಿಸು ಪ್ರಭು. ಸಂಭವಾಮಿ ಯುಗೇ ಯುಗೇ.. ಎಂದು ಬರೆದುಕೊಂಡಿದ್ದಾನೆ.
ಈ ಪೋಸ್ಟ್ ಅನ್ನು ಫೇಸ್‌ಬುಕ್‌ನಲ್ಲಿ ಶೇರ್ ಮಾಡಿಕೊಂಡ ಐದು ದಿನಗಳಲ್ಲೇ, ಆರೋಪಿ ಗುರೂಜಿ ಅವರನ್ನು ಕೊಲೆ ಮಾಡಿದ್ದಾನೆ ಇದೀಗ ಈ ಪೋಸ್ಟ್ ಕೂಡಾ ವೈರಲ್ ಆಗಿದ್ದು ಚರ್ಚೆಗೂ ಗ್ರಾಸ ಒದಗಿಸಿದೆ.

