ಮೈಸೂರು: ಅತಿವೃಷ್ಠಿಯಾಗುತ್ತಿರುವ ಹಿನ್ನಲೆಯಲ್ಲಿ ಬೆಂಗಳೂರು ಸೇರಿದಂತೆ ರಾಜ್ಯದ ಎಲ್ಲ ಮಹಾನಗರ ಪಾಲಿಕೆಯ ಆಯುಕ್ತರ ಸಂಪರ್ಕದಲ್ಲಿದ್ದೇನೆ ಎಂದು ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜು ತಿಳಿಸಿದರು.
ನಗರದಲ್ಲಿ ಶುಕ್ರವಾರ ಮಾಧ್ಯಮ ಪ್ರತಿ ನಿಧಿಗಳೊಂದಿಗೆ ಮಾತನಾಡಿದ ಅವರು, ಎಲ್ಲೆಲ್ಲಿ ಮಳೆಯಿಂದ ಹಾನಿಯಾಗಿದೆ,ಎಲ್ಕು ಸಮಸ್ಯೆ ಉಲ್ಬಣಿಸಿದೆ ಅಂತಹ ಭಾಗಗಳಲ್ಲಿ ಕೂಡಲೇ ಸ್ಪಂದಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದು ತಿಳಿಸಿದರು.
ಎಲ್ಲೆಲ್ಲಿ ಏನೇನು ಅನಾಹುತಗಳಾಗಿವೆ ತಕ್ಷಣ ಪರಿಹಾರ ಒದಗಿಸುವ ಕಾರ್ಯವನ್ನು ಮಾಡುವಂತೆ ಎಲ್ಲ ಮಹಾನಗರ ಪಾಲಿಕೆ ಆಯುಕ್ತರಿಗೂ ಸೂಚಿಸಿದ್ದೇನೆ ಎಂದು ಹೇಳಿದರು.
ಪಿಎಸ್ ಐ ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ವಹಿಸಲು ಡಿ.ಕೆ.ಶಿವಕುಮಾರ್ ಆಗ್ರಹಿಸಿದ್ದಾರಲ್ಲ ಎಂಬ ಪ್ರಶ್ನೆಗೆ ಪ್ರಕರಣ ಈಗಾಗಲೇ ಸಿಐಡಿ ತನಿಖೆಯಲ್ಲಿದೆ ಹಾಗಾಗಿ ಈ ಕುರಿತು ಏನೂ ಮಾತನಾಡುವುದಿಲ್ಲ ಎಂದು ಬೈರತಿ ತಿಳಿಸಿದರು.

