ಬೆಂಗಳೂರು: ಅಮರನಾಥದಲ್ಲಿ ಕನ್ನಡಿಗರ ರಕ್ಷಣೆಗೆ ಸರ್ಕಾರ ಕ್ರಮ ಕೈಗೊಂಡಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಮಾಧ್ಯಮ ಪ್ರತಿ ನಿಧಿಗಳೊಂದಿಗೆ ಮಾತನಾಡಿ ದ ಅವರು,ಮೇಘಸ್ಪೋಟದಿಂದ 15 ಜನ ಸಾವನ್ನಪ್ಪಿದ್ದು, ಪ್ರಾಥಮಿಕ ಮಾಹಿತಿಯ ಪ್ರಕಾರ ನೂರಕ್ಕೂ ಹೆಚ್ಚು ಜನ ಕನ್ನಡಿಗರು ಅಮರನಾಥ ಯಾತ್ರೆಯಲ್ಲಿದ್ದಾರೆ ಎಂದು ಹೇಳಿದರು.
ರಾಜ್ಯದಿಂದ ಅಮರನಾಥ ಯಾತ್ರೆ ಕೈಗೊಂಡಿದ್ದ ಕನ್ನಡಿಗರು ಸುರಕ್ಷಿತವಾಗಿದ್ದಾರೆ, ಅಲ್ಲಿಯ ರಾಜ್ಯ ಸರ್ಕಾರ ಮತ್ತು ಕೇಂದ್ರ ಸರ್ಕಾರದ ಜೊತೆ ನಾವು ಸಂಪರ್ಕದಲ್ಲಿದ್ದೇವೆ ಎಂದು ತಿಳಿಸಿದರು.
ರಕ್ಷಣಾ ಕಾರ್ಯಕ್ಕಾಗಿ ಸಹಾಯವಾಣಿ ತೆರೆಯಲಾಗಿದೆ. ಈಗಾಗಲೇ 15-20 ಜನ ಕರೆ ಮಾಡಿ ತಾವು ಸಿಲುಕಿರುವ ಸ್ಥಳದ ಬಗ್ಗೆ ಮಾಹಿತಿ ನೀಡಿದ್ದಾರೆ ಎಂದು ಸಿಎಂ ತಿಳಿಸಿದರು.
ರಕ್ಷಣಾ ಕಾರ್ಯವನ್ನು ಕೈಗೊಳ್ಳಲಾಗಿದೆ ಎಂದು ಹೇಳಿದರು.
ಕೇಂದ್ರ ಸರ್ಕಾರ, ಗಡಿ ರಕ್ಷಣಾ ಪಡೆ, ಇಂಡಿಯನ್ ಟಿಬೆಟ್ ಫೋರ್ಸ್ ಎಲ್ಲರೂ ರಕ್ಷಣಾ ಕಾರ್ಯದಲ್ಲಿ ತೊಡಗಿದ್ದರೆ.
ಮುಖ್ಯ ಕಾರ್ಯದರ್ಶಿಗಳು ನೇರವಾಗಿ ಕೇಂದ್ರ ಸರ್ಕಾರದೊಂದಿಗೆ ಸಂಪರ್ಕದಲ್ಲಿದ್ದಾರೆ. ತೊಂದರೆಗೆ ಸಿಲುಕಿರುವವರು ಸಹಾಯವಾಣಿಗೆ ಕರೆ ಮಾಡಿದರೆ ಕೂಡಲೇ ರಕ್ಷಣೆಗೆ ಕ್ರಮ ವಹಿಸಲಾಗುವುದು ಎಂದು ಬೊಮ್ಮಾಯಿ ಭರವಸೆ ನೀಡಿದರು.

