ನವದೆಹಲಿ: ನ್ಯಾಯಾಂಗ ನಿಂದನೆ ಪ್ರಕರಣ ಸಂಬಂಧ ಉದ್ಯಮಿ ವಿಜಯ್ ಮಲ್ಯಗೆ ಸುಪ್ರೀಂಕೋರ್ಟ್ ನಾಲ್ಕು ತಿಂಗಳು ಜೈಲು ಶಿಕ್ಷೆ ವಿಧಿಸಿದೆ.
2017ರಲ್ಲಿ ವಿಜಯ್ ಮಲ್ಯ ಬ್ರಟಿಷ್ ಕಂಪನಿ ಡಿಯೋಗೋದಿಂದ ಪಡೆದಿದ್ದ 40 ಮಿಲಿಯನ್ ಹಣವನ್ನು ತನ್ನ ಮಕ್ಕಳಿಗೆ ವರ್ಗಾವಣೆ ಮಾಡಿದ್ಧರು.
ಇದರ ವಿರುದ್ದ ಎಸ್ ಬಿ ಐ ಸುಪ್ರೀಂ ಕೋರ್ಟ್ ಮೆಟ್ಟಿಲೇರಿತ್ತು. ಈ ಹಿಂದೆಯೇ ವಿಜಯ್ ಮಲ್ಯಾಗೆ ಸುಪ್ರೀಂಕೋರ್ಟ್ ತಪ್ಪಿತಸ್ಥ ಎಂದು ತೀರ್ಪು ನೀಡಿತ್ತು.
ಇದೀಗ ಉದ್ಯಮಿ ವಿಜಯ್ ಮಲ್ಯಗೆ ನ್ಯಾಯಾಲಯ ನಾಲ್ಕು ತಿಂಗಳು ಜೈಲು ಶಿಕ್ಷೆ ವಿಧಿಸಿದೆ.
ನ್ಯಾಯಾಂಗ ನಿಂದನೆ ಮಾಡಿದ 2017 ರ ತೀರ್ಪನ್ನು ಮರುಪರಿಶೀಲಿಸುವಂತೆ ಕೋರಿ ಮಲ್ಯ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ 2020 ರಲ್ಲಿ ವಜಾಗೊಳಿಸಿತ್ತು.

