ಆರ್ ಎಸ್ ಎಸ್ ಕಚೇರಿ ಮೇಲೆ ಬಾಂಬ್ ದಾಳಿ; ಕಿಟಕಿ ಗಾಜು ಪುಡಿಪುಡಿ

ಕಣ್ಣೂರು: ಕೇರಳದ ಕಣ್ಣೂರು ಜಿಲ್ಲೆಯ ಪಯ್ಯನ್ನೂರಿನಲ್ಲಿನಲ್ಲಿರುವ ಆರ್‌ಎಸ್ಎಸ್ ಕಚೇರಿ ಮೇಲೆ ಬಾಂಬ್ ದಾಳಿ ನಡೆದಿದೆ.

ಕಚೇರಿಯ ಕಿಟಕಿ ಗಾಜುಗಳು ಹಾನಿಗೊಳಗಾಗಿವೆ ಇದು ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ಮಂಗಳವಾರ ಮುಂಜಾನೆ ಕಚೇರಿಯ ಮೇಲೆ ಬಾಂಬ್ ದಾಳಿಯಾಗಿದೆ. ಸ್ಫೋಟದಿಂದ ಕಚೇರಿ ಕಿಟಕಿಯ ಗಾಜುಗಳು ಜಕ್ಕಂಗೊಂಡಿವೆ . ಉಳಿದಂತೆ ಹೆಚ್ಚಿನ ಹಾನಿಯಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು ಸುತ್ತಮುತ್ತಲ ಪರಿಸರವನ್ನು ಪರಿಶೀಲಿಸಿದ್ದಾರೆ .

ಇತ್ತೀಚೆಗೆ ಕೇರಳದಲ್ಲಿ ಈ ರೀತಿಯ ಬಾಂಬ್ ದಾಳಿಗಳು ಸಾಮಾನ್ಯವಾಗಿಬಿಟ್ಟಿವೆ.

ಕೇರಳದ ತಿರುವನಂತಪುರಂನ ಸಿಪಿಐಎಂನ ಕೇಂದ್ರ ಕಚೇರಿ ಮೇಲೂ ದಾಳಿ ನಡೆಸಲಾಗಿತ್ತು.

ಹಲವಾರು ಕಾಂಗ್ರೆಸ್ ಕಚೇರಿಗಳ ಮೇಲೂ ದಾಳಿಯಾಗಿತ್ತು.