ಮೈಸೂರು: ಪರಿಸರ ಸಮತೋಲನಕ್ಕೆ ಉರಗ ಸಂತತಿಯ ಉಳಿವೂ ಅತೀ ಮುಖ್ಯ ಎಂದು ಉರಗತಜ್ಞ ಸ್ನೇಕ್ ಶ್ಯಾಮ್ ತಿಳಿಸಿದರು.
ವಿಶ್ವ ಹಾವುಗಳ ದಿನಾಚರಣೆ ಅಂಗವಾಗಿ 85000 ಸಾವಿರಕ್ಕೂ ಹೆಚ್ಚು ಹಾವುಗಳನ್ನು ಸಂರಕ್ಷಿಸಿದಕ್ಕಾಗಿ ಪರಿಸರ ಸ್ನೇಹಿ ತಂಡದ ವತಿಯಿಂದ ಏರ್ಪಡಿಸಿದ್ದ ಸನ್ಮಾನಿಸ ಸ್ವೀಕರಿಸಿ ಶ್ಯಾಮ್ ಮಾತನಾಡಿದರು.
ಪ್ರತಿಯೊಬ್ಬರೂ ತಮ್ಮ ಮನೆಯ ಸುತ್ತಮುತ್ತಲಿನ ಉಪಯುಕ್ತ ಸ್ಥಳದಲ್ಲಿ ಗಿಡಗಳನ್ನು ನೆಟ್ಟು ಬೆಳೆಸಬೇಕು. ಆ ಮೂಲಕ ಪರಿಸರವನ್ನು ಶುದ್ಧವಾಗಿಸುವ ಅಲ್ಪ ಸೇವೆಯನ್ನು ಮಾಡಬಹುದಾಗಿದೆ ಎಂದು ತಿಳಿಸಿದರು.
ಪರಿಸರದಲ್ಲಿರುವ ಪ್ರತಿಯೊಂದು ಜೀವಿಯೂ ಒಂದನ್ನೊಂದು ಅವಲಂಬಿಸಿಯೇ ಬದುಕುವುದರಿಂದ ಪ್ರತಿಯೊಂದಕ್ಕೂ ಪ್ರಾಮುಖ್ಯತೆಯಿದೆ. ಎಲ್ಲವನ್ನೂ ಗೌರವಿಸಿ ಎಂದು ಹೇಳಿದರು.
ಉರಗಗಳ ಬಗೆಗೆ ವಿಶೇಷ ಮಾಹಿತಿಯನ್ನು ನೀಡಿದರು. ಉರಗ ಪ್ರಭೇದಗಳು, ಅವುಗಳ ಸಂತತಿ, ಹಾವಿನ ಕಡಿತದ ಬಳಿಕ ನಡೆಸುವ ಪ್ರಥಮ ಚಿಕಿತ್ಸೆಗಳ ಕುರಿತು ಶ್ಯಾಮ್ ಸಚಿತ್ರ ಮಾಹಿತಿ ನೀಡಿದರು.
ಸನ್ಮಾನ ಸ್ವೀಕರಿಸಿ ಮಾತನಾಡಿದ ವೈಲ್ಡ್ ಲೈಫ್ ಕನ್ಸರ್ವೇಷನ್ ಫೌಂಡೇಷನ್ ಡಿ. ರಾಜಕುಮಾರ್ ರವರು ಮಾತನಾಡಿ ಹಾವನ್ನ ನಾವು ಜೀವಭಯದಿಂದ ಹಿಡಿಯಬಾರದು ವೈಜ್ಞಾನಿಕವಾಗಿ ಜೀವರಕ್ಷಣೆಯಿಂದ ಹಿಡಿಯಬೇಕು ಎಂದು ತಿಳಿಸಿದರು.
ಎನ್.ಎಂ ನವೀನ್ ಕುಮಾರ್ ಮಾತನಾಡಿ ಕೋವಿಡ್ ನಂತಹ ಕಷ್ಡಕಾಲದಲ್ಲೂ ಮನೆಗಳಿಗೆ ಹಾವು ಬಂದಾಗ ಸ್ನೇಕ್ ಶ್ಯಾಮ್ ರವರು ಹಾವನ್ನ ಸಂರಕ್ಷಿಸಿದ್ದಾರೆ ಎಂದು ಶ್ಲಾಘಿಸಿದರು.
ಪರಿಸರ ಸಂರಕ್ಷಣೆ ವಿಚಾರವಾಗಿ ಪಠ್ಯಪುಸ್ತಕಗಳಲ್ಲಿ ಸ್ನೇಕ್ ಶ್ಯಾಮ್ ರವರ ಸೇವೆ ಮತ್ತು ಪರಿಸರ ಕಾಳಜಿಯ ವಿಷಯದ ಬಗ್ಗೆ ರಾಜ್ಯ ಸರ್ಕಾರ ಅಳವಡಿಸಿ ಸಣ್ಣಮಕ್ಕಳಲ್ಲಿ ಉರಗ ಮತ್ತು ಪರಿಸರ ಸಂರಕ್ಷಣೆ ಬಗ್ಗೆ ಜಾಗೃತಿ ಮೂಡಿಸಬೇಕು ಎಂದು ಮನವಿ ಮಾಡಿದರು
ಪರಮಪೂಜ್ಯ ಇಳೆಯಾಳ್ವಾರ್ ಸ್ವಾಮೀಜಿ ,ಹೋಟೆಲ್ ಮಾಲೀಕರ ಸಂಘದ ಅಧ್ಯಕ್ಷರಾದ ನಾರಾಯಣ್ ಗೌಡ,ಕಾಂಗ್ರೆಸ್ ಯುವ ಮುಖಂಡ ಎನ್. ಎಂ. ನವೀನ್ ಕುಮಾರ್ ಜೀವಧಾರ ರಕ್ತನಿಧಿ ಕೇಂದ್ರದ ನಿರ್ದೇಶಕ ಗಿರೀಶ್ ,ಮೃಗಾಲಯ ಪ್ರಾಧಿಕಾರ ಸದಸ್ಯರಾದ ಜ್ಯೋತಿ ರೇಚಣ್ಣ ,ಪರಿಸರ ಸ್ನೇಹಿ ತಂಡದ ಅಧ್ಯಕ್ಷ ಲೋಹಿತ್ ,ಕೆಎಂಪಿಕೆ ಚಾರಿಟಬಲ್ ಟ್ರಸ್ಟ್ ಅಧ್ಯಕ್ಷ ವಿಕ್ರಮ್ ಅಯ್ಯಂಗಾರ್,ಅಜಯ್ ಶಾಸ್ತ್ರಿ ,ಸುಚೇಂದ್ರ ,ಚಕ್ರಪಾಣಿ ,
ಶಿಕ್ಷಕರಾದ ಚಂಪಾಶ್ರೀ,ಮಮತಾ,ದಿವ್ಯಾ ಮತ್ತಿತರರು ಹಾಜರಿದ್ದರು.
ಸೂರ್ಯ ಕೀರ್ತಿ ಮತ್ತು ಪ್ರದೀಪ್ ಅವರನ್ನೂ ಪರಿಸರ ಸ್ನೇಹಿ ತಂಡದ ವತಿಯಿಂದ ಸನ್ಮಾನಿಸಲಾಯಿತು.

