ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಬೃಹತ್ ಪ್ರತಿಭಟನೆ

ಬೆಂಗಳೂರು: ಜಾರಿ ನಿರ್ದೇಶನಾಲಯದ ನೋಟಿಸ್ ಆಧರಿಸಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ನ್ಯಾಷನಲ್ ಹೆರಾಲ್ಡ್ ಪ್ರಕರಣದ ವಿಚಾರಣೆಗೆ ಹಾಜರಾದ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿದಂತೆ ದೇಶಾದ್ಯಂತ ಕಾಂಗ್ರೆಸ್ ಕಾರ್ಯಕರ್ತರು ಬೃಹತ್ ಪ್ರತಿಭಟನೆ ನಡೆಸಿದರು.

ಸಂಸತ್‍ನ ಉಭಯ ಸದನಗಳ ಒಳಗೆ ಮತ್ತು ಹೊರಗೂ ಬೃಹತ್ ಪ್ರತಿಭಟನೆಗಳು ನಡೆಯಿತು.

ನ್ಯಾಷನಲ್ ಹೆರಾಲ್ಡ್ ಪ್ರಕರಣದ ವರ್ಗಾವಣೆಗೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ಜಾರಿ ನಿರ್ದೇಶನಾಲಯ ಮೂರನೇ ಬಾರಿ ನೋಟಿಸ್ ನೀಡಿತ್ತು.

ಕೇಂದ್ರ ಸರ್ಕಾರ ಜಾರಿ ನಿರ್ದೇಶನಾಲಯ, ಸಿಬಿಐ, ಆದಾಯ ತೆರಿಗೆ ಸೇರಿದಂತೆ ಕೇಂದ್ರದ ತನಿಖಾ ಸಂಸ್ಥೆಗಳನ್ನು ದುರುಪಯೋಗ ಪಡಿಸಿಕೊಳ್ಳುತ್ತಿದೆ ಎಂದು ಆರೋಪಿಸಿ ಕಾಂಗ್ರೆಸ್ ಪ್ರತಿಭಟನೆ ನಡೆಸಿತು.

ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್,ವೀರಪ್ಪ ಮೊಯಿಲಿ, ದಿನೇಶ್ ಗುಂಡೂರಾವ್ ರಮೇಶ್ ಕುಮಾರ್,ರಾಮಲಿಂಗಾರೆಡ್ಡಿ ಸೇರಿದಂತೆ ಸಾವಿರಾರು ಕಾರ್ಯಕರ್ತರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.