ಬೆಂಗಳೂರು: ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ಬರಲು ಬಿಡುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು.
ಮಾಧ್ಯಮ ಪ್ರತಿ ನಿಧಿಗಳೊಂದಿಗೆ ಮಾತನಾಡಿದ ಅವರು, ಯಾರು ಏನೇ ಹೇಳಿದರೂ 2023ರ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಅಧಿಕಾರಕ್ಕೆ ಬರುವುದು ಖಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಕೂಸು ಹುಟ್ಟುವ ಮೊದಲೇ ಕುಲಾವಿ ಹೊಲಿಸಿದರು ಎಂಬಂತೆ ಕಾಂಗ್ರೆಸ್‍ನಲ್ಲಿ ಆಗಲೇ ಮುಖ್ಯಮಂತ್ರಿ ಕುರ್ಚಿಗೆ ಹಾದಿಬೀದಿಯಲ್ಲಿ ಬಡೆದಾಡಿಕೊಳ್ಳುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಟೀಕಿಸಿದರು.
ಅಧಿಕಾರಕ್ಕೆ ಬಂದರೆ ತಾನೆ ಮುಖ್ಯಮಂತ್ರಿಯಾಗುವುದು ಎಂದು ಬಿಎಸ್ ವೈ ವ್ಯಂಗ್ಯವಾಡಿದರು.
ರಾಜ್ಯದ ಜನತೆ ಕಾಂಗ್ರೆಸ್ ಪಕ್ಷವನ್ನು ಸಂಪೂರ್ಣವಾಗಿ ತಿರಸ್ಕರಿಸಲಿದ್ದಾರೆ. ಚುನಾವಣೆ ವೇಳೆಗೆ ಅವರ ಆಂತರಿಕ ಕಚ್ಚಾಟ ಮತ್ತಷ್ಟು ಹೆಚ್ಚಾಗಲಿದೆ ಎಂದು ಹೇಳಿದರು.

