ಬೆಂಗಳೂರು: ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಶಿಕಾರಿಪುರದಿಂದ ತಮ್ಮ ಪುತ್ರ ಬಿ.ವೈ.ವಿಜಯೇಂದ್ರ ಸ್ರ್ಪರ್ಧಿಸಲಿದ್ದಾರೆ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.
ಮಾಧ್ಯಮ ಪ್ರತಿ ನಿಧಿಗಳೊಂದಿಗೆ ಮಾತನಾಡಿದ ಅವರು, ನನ್ನ ಪುತ್ರ ವಿಜಯೇಂದ್ರ ಮೈಸೂರಿನ ವರುಣ ಕ್ಷೇತ್ರದಿಂದ ಸ್ರ್ಪಧಿಸುವುದಿಲ್ಲ ನನ್ನ ಸ್ವ ಕ್ಷೇತ್ರ ಶಿಕಾರಿಪುರದಿಂದ ಸ್ಪರ್ಧಿಸಲಿದ್ದಾರೆ ಎಂದರು.
ವಿಜಯೇಂದ್ರ ಸ್ಪರ್ಧೆ ಬಗ್ಗೆ ಹಲವು ಪ್ರಶ್ನೆಗಳು ಎದ್ದಿದ್ದವು.ಈಗ ಎಲ್ಲಾ ಗೊಂದಲಗಳಿಗೂ ತೆರೆ ಎಳೆದಿರುವ ಯಡಿಯೂರಪ್ಪ ಅವರು, ತಮ್ಮ ಪುತ್ರ ವಿಜಯೇಂದ್ರ ಶಿಕಾರಿಪುರದಿಂದಲೇ ಕಣಕ್ಕಿಳಿಯುತ್ತಾರೆ ಎಂದು ಸ್ಪಷ್ಟಪಡಿಸಿದ್ದಾರೆ.
ಮುಂದಿನ ಚುನಾವಣೆಯಲ್ಲಿ ಬಿಜೆಪಿಯನ್ನು ಅಧಿಕಾರಕ್ಕೆ ತರುತ್ತೇನೆ ಎಂದು ನೇರವಾಗಿ ವಿಪಕ್ಷಗಳಿಗೆ ನಮ್ಮ ತಂದೆ ಯಡಿಯೂರಪ್ಪ ಅವರು ಸವಾಲು ಹಾಕಿದ್ದಾರೆ ಹಾಗಾಗಿ ಅವರು ನಿವೃತ್ತಿಯಾಗುವ ಪ್ರಶನೆಯೇ ಇಲ್ಲ ಎಂದು ಇದೇ ವೇಳೆ ವಿಜಯೇಂದ್ರ ಮಾಧ್ಯಮ ಪ್ರತಿ ನಿಧಿಗಳಿಗೆ ತಿಳಿಸಿದರು.
ಬಿಜೆಪಿಯನ್ನು ಸಂಘಟಿಸುವ ಕಾರ್ಯದಲ್ಲಿ ಅವರು ಸಕ್ರಿಯವಾಗಿ ತೊಡಗುತ್ತಾರೆ. ನಿವೃತ್ತಿ ಎಂಬುದು ಅವರ ಡಿಕ್ಷನರಿಯಲ್ಲೇ ಇಲ್ಲ ಎಂದು ಹೇಳಿದರು.

