ಅಪಘಾತ ದಲ್ಲಿ ಪೊಲೀಸ್ ಸಿಬ್ಬಂದಿ ಸಾವು: ಗೃಹ ಸಚಿವರ ಕಂಬನಿ

ಬೆಂಗಳೂರು: ಮುಂಜಾನೆ ಬಾಗಲಕೋಟೆ ಜಿಲ್ಲೆ ಚಿತ್ತೂರು ಸಮೀಪ ಸಂಭವಿಸಿದ ರಸ್ತೆ ಅಪಘಾತದಲ್ಲಿ ಇಬ್ಬರು ಪೊಲೀಸ್ ಸಿಬ್ಬಂದಿ ಮರಣ ಹೊಂದಿ ಐದು ಮಂದಿ ಗಾಯಗೊಂಡಿರುವ ಬಗ್ಗೆ, ಗೃಹ ಸಚಿವ ಆರಗ ಜ್ಞಾನೇಂದ್ರ ಕಂಬನಿ ಮಿಡಿದಿದ್ದಾರೆ.

ಅಪಘಾತದ ಸುದ್ದಿ ತಿಳಿದ ತಕ್ಷಣ ಹಿರಿಯ ಪೊಲೀಸ್ ಅಧಿಕಾರಿಗಳನ್ನು ಸಂಪರ್ಕಿಸಿ, ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ಕೊಡಿಸಲು ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದೇನೆ ಎಂದು ತಿಳಿಸಿದರು.

ಮಾಧ್ಯಮ ಪ್ರತಿ ನಿಧಿಗಳೊಂದಿಗೆ ಮಾತನಾಡಿದ ಅವರು
ಬೆಂಗಳೂರಿನ ಶಿವಾಜಿ ನಗರದ ಪೊಲೀಸ್ ಠಾಣೆಯ ಸಿಬ್ಬಂದಿಗಳು ತನಿಖೆಯ ಸಂಬಂಧ ಬೀದರ್ ಗೆ ತೆರಳುತ್ತಿದ್ದರು ಆಗ ಅಪಘಾತ ಸಂಭವಿಸಿದೆ ಎಂದು ಹೇಳಿದರು

ಗಾಯಗೊಂಡ ಸಿಬ್ಬಂದಿಗಳ ನೆರವಿಗೆ ಧಾವಿಸಿ, ಅತ್ಯುತ್ತಮ ಚಿಕಿತ್ಸೆ ದೊರಕಿಸಲು ಎಲ್ಲಾ ಅಗತ್ಯ ಕ್ರಮ ಜರುಗಿಸಬೇಕು ಎಂದೂ ಸೂಚಿಸಿದ್ದೇನೆ.

ಸಾರ್ವಜನಿಕರ ಪ್ರಾಣ ಹಾಗೂ ಆಸ್ತಪಾಸ್ತಿಗಳ ರಕ್ಷಿಸುವ ಕಾರ್ಯದಲ್ಲಿ, ಪೊಲೀಸ್ ಸಿಬ್ಬಂದಿ ಮೃತ ಪಟ್ಟಿರುವುದು ಅತ್ಯಂತ ನೋವು ತಂದಿದೆ ಎಂದು ಸಚಿವರು ಹೇಳಿದರು.

ಕೊಪ್ಪಳ ಜಿಲ್ಲೆಯ ಕುಕನೂರಿನ ಬಳಿ ಸಂಭವಿಸಿದ ಇನ್ನೊಂದು ಭೀಕರ ಅಪಘಾತದಲ್ಲಿ ಐದು ಮಂದಿ ಮೃತ ಪಟ್ಟಿದ್ದು ಇದರ ಬಗ್ಗೆಯೂ ಸಚಿವರು ದುಃಖ ವ್ಯಕ್ತಪಡಿಸಿದರು.

ಸ್ಥಳೀಯ ಪೊಲೀಸರು ಘಟನೆಯ ಸಂಬಂಧ ತನಿಖೆ ನಡೆಸಿದ್ದಾರೆ ಎಂದ ಹೇಳಿದರು.