ಮೈಸೂರು: ಮರಗಳನ್ನು ಬೆಳೆಸಿ ವೃಕ್ಷ ಮಾತೆ ಎಂದು ಖ್ಯಾತಿ ಹೊಂದಿರುವ ಸಾಲು ಮರದ ತಿಮ್ಮಕ್ಕ ಅವರಿಗೆ ಕೆಎಂಪಿಕೆ ಚಾರಿಟಬಲ್ ಟ್ರಸ್ಟ್ ವತಿಯಿಂದ ಸನ್ಮಾನಿಸಲಾಯಿತು.
ಈ ವೇಳೆ ಮಾತನಾಡಿದ ಕೆಎಂಪಿಕೆ ಚಾರಿಟಬಲ್ ಟ್ರಸ್ಟ್ ಅಧ್ಯಕ್ಷ ವಿಕ್ರಂ ಅಯ್ಯಂಗಾರ್, ಸರ್ಕಾರ ಸಾಲುಮರದ ತಿಮ್ಮಕ್ಕ ಅವರ ಸೇವೆಯನ್ನು ಗುರುತಿಸಿ ಉತ್ತಮವಾದ ಸ್ಥಾನಮಾನ ನೀಡಿರುವುದು ಶ್ಲಾಘನೀಯ ಎಂದು ಹೇಳಿದರು.
ಮುಂದಿನ ಪೀಳಿಗೆಗೆ ಅವರ ಸೇವೆಯನ್ನು ಪರಿಚಯಿಸುವ ನಿಟ್ಟಿನಲ್ಲಿ
ವೃಕ್ಷಮಾತೆ ಸಾಲುಮರದ ತಿಮ್ಮಕ್ಕರಿಗೆ ಅವರಿಗೆ ಲಭಿಸಿದ ಪ್ರಶಸ್ತಿಗಳು ಹಾಗೂ ಅವರ ಸಾಧನೆ ಬಿಂಬಿಸಲು ವಸ್ತು ಸಂಗ್ರಹಾಲಯ ನಿರ್ಮಿಸಲು
ಸರ್ಕಾರ ಮುಂದಾಗಬೇಕೆಂದು ಮನವಿ ಮಾಡಿದರು.
ನಗರ ಪಾಲಿಕೆ ಮಾಜಿ ಸದಸ್ಯ ಎಂ. ಡಿ. ಪಾರ್ಥಸಾರಥಿ,ಬಿಜೆಪಿ ಮಾಧ್ಯಮ ಪ್ರಮುಖ್ ಕೇಬಲ್ ಮಹೇಶ್,ಅಪೂರ್ವ ಸುರೇಶ್ ,ಪರಿಸರ ಸ್ನೇಹಿ ತಂಡದ ಅಧ್ಯಕ್ಷ ಲೋಹಿತ್, ಶ್ರೀಕಾಂತ್ ಕಶ್ಯಪ್,ಶಿವು,ಮಹದೇವ್ ಪ್ರಸಾದ್ ಮತ್ತಿತರರು ಹಾಜರಿದ್ದರು.

