ಹಂತಕರ ಆಟಕ್ಕೆ ಇತಶ್ರೀ ಹಾಡಿ, ಕೊಲೆಗಾರರ ಮಟ್ಟ ಹಾಕಿ -ಎಚ್ ಡಿ ಕೆ ಆಗ್ರಹ

ಬೆಂಗಳೂರು: ರಾಜ್ಯದಲ್ಲಿ ಹಂತಕರ ಆಟಕ್ಕೆ ಕೊನೆಯೇ ಇಲ್ಲದಂತಾಗಿದೆ,ಇದನ್ನು ಮಟ್ಟ ಹಾಕಬೇಕು ಎಂದು ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ‌ಸರ್ಕಾರವನ್ನು ಆಗ್ರಹಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು ಹಂತಕರ ಆಟಕ್ಕೆ ಇತಿಶ್ರೀ ಹಾಡಬೇಕು,ಅಂತವರನ್ನು ಮಟ್ಟ ಹಾಕಬೇಕು ಎಂದು ಒತ್ತಾಯಿಸಿದ್ದಾರೆ.
ರಾಜ್ಯದಲ್ಲಿ ಯುವಕರ ಕೊಲೆಗಳ ಸರಣಿ ಮುಂದುವರಿದಿದೆ, ಇನ್ನೊಂದು ಜೀವ ಹೋಗಿದೆ. ಈ ಹತ್ಯಾಕಾಂಡಕ್ಕೆ ಕೊನೆಯೇ ಇಲ್ಲವೇ ಎಂದು ಖಾರವಾಗಿ ಪ್ರಶ್ನಿಸಿದ್ದಾರೆ.
ಕೊಲೆ ಅದ ಮೇಲೆ ನಡೆಯುವ ಹೇಳಿಕೆಗಳ ಭರಾಟೆ, ಕೂಗಾಟದಿಂದ ಪ್ರಯೋಜನ ಇಲ್ಲ, ಶಿವಮೊಗ್ಗದಲ್ಲಿ ಹರ್ಷ ಕೊಲೆ ಅದ ಮೇಲೆ ರಾಜ್ಯ ಸರ್ಕಾರ ಮೈಮರೆತಿದ್ದು ಯಾಕೆ ಎಂದು ಕಿಡಿಕಾರಿದ್ದಾರೆ
ಪ್ರತಿ ಕೊಲೆ ಆದ ಮೇಲೆಯೂ ಮೈ ಕೊಡವಿಕೊಂಡು ಎದ್ದೇಳುವ ರಾಜ್ಯ ಸರ್ಕಾರ, ಕೊಲೆಯೇ ಆಗದಂತೆ ತಡೆಯುವ ಪ್ರಯತ್ನ ಮಾಡುತ್ತಿಲ್ಲ ಎಂದು ಕುಟುಕಿದ್ದಾರೆ.
ಕೊಲೆಗಳೆಂದರೆ ಕೆಲವರಿಗೇಕೆ ಇಷ್ಟೊಂದು ಇಷ್ಟ? ಚುನಾವಣೆ ಹತ್ತಿರ ಆದಂತೆಲ್ಲ ನೆತ್ತರ ಓಕುಳಿ ಹರಿಯುತ್ತಿದೆ.  ಈ ನೆತ್ತರ ಮೇಲೆ ರಾಜಕೀಯ ಆಟ ವಿಜೃಂಭಿಸುತ್ತಿದೆ ಎಂದು ಕುಮಾರಸ್ವಾಮಿ ಬೇಸರ ವ್ಯಕ್ತಪಡಿಸಿದ್ದಾರೆ.
ಶಾಂತಿ, ಸುವ್ಯಸ್ಥೆ ಸಮಸ್ಯೆಯಿಂದ ಆರ್ಥಿಕ ಹಿಂಜರಿತ ಉಂಟಾಗಿ ಕೈಗಾರಿಕೆಗಳು ವಲಸೆ ಹೋದರೆ ಎದುರಾಗುವ ನಿರುದ್ಯೋಗ ಸಮಸ್ಯೆಗೆ ಯಾರು ಹೊಣೆ ಆಗುತ್ತಾರೆ.
ನಿರುದ್ಯೋಗವೇ ಇಂಥ ಘಟನೆಗಳಿಗೆ ಕಾರಣ. ಹತಾಶ ಯುವಕರ ಮನಸ್ಸು ಕೆಡಿಸಲಾಗುತ್ತಿದೆ. ಈ ಬಗ್ಗೆ ಎಲ್ಲರೂ ಆತ್ಮಾವಲೋಕನ ಮಾಡಿಕೊಳ್ಳಬೇಕು ಎಂದು ಎಚ್ ಡಿ ಕೆ ಹೇಳಿದ್ದಾರೆ.