ಪ್ರವೀಣ್ ನೆಟ್ಟಾರ್ ಹಂತಕರನ್ನು ಕೂಡಲೇ ಬಂಧಿಸಿ; ಸಿದ್ದು ಆಗ್ರಹ

ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದಿರುವ ಬಜರಂಗದಳದ ನಾಯಕ ಪ್ರವೀಣ್ ನೆಟ್ಟಾರ್ ಮಾಡಿರುವವರನ್ನು ಕೂಡಲೇ ಬಂಧಿಸಬೇಕೆಂದು ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.
ಪ್ರವೀಣ್ ನೆಟ್ಟಾರ್ ಹತ್ಯೆಯನ್ನು ಖಂಡಿಸಿರುವ ಅವರು,ಕೂಡಲೇ ಹಂತಕರನ್ನು ಬಂಧಿಸಿ ಊಹಾಪೋಹಗಳಿಂದ ಶಾಂತಿ-ಸುವ್ಯವಸ್ಥೆ ಕದಡುವುದನ್ನು ತಪ್ಪಿಸಬೇಕು ಎಂದು ಒತ್ತಾಯಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಸಿದ್ದು, ಕೊಲೆಗಡುಕರು ಯಾರೇ ಆಗಿರಲಿ,ಯಾವುದೇ ಪಕ್ಷ, ಜಾತಿ,ಧರ್ಮವನ್ನು ಲೆಕ್ಕಿಸದೆ ಪೊಲೀಸರು ಮುಲಾಜಿಲ್ಲದೆ ಕ್ರಮಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.
ಶ್ರೀರಾಮಸೇನೆ,ಬಜರಂಗದಳ, ಆರ್ ಎಸ್ ಎಸ್ ಮೇಲೆ ಬುಲ್ಡೋಜರ್ ನುಗ್ಗಿಸಬೇಕು ಎಂದು ನಾನು ಕರೆಕೊಟ್ಟಿದ್ದೇನೆ ಎಂಬ ಅರ್ಥದಲ್ಲಿ ಪ್ರಕಟವಾಗಿದ್ದ ಪತ್ರಿಕಾ ವರದಿಯನ್ನು ಬಹಳಷ್ಟು ಬಿಜೆಪಿ ಬೆಂಬಲಿಗರು ಹಂಚಿಕೊಂಡು ನನ್ನ ವಿರುದ್ಧ ಅಪಪ್ರಚಾರ ನಡೆಸುತ್ತಿದ್ದಾರೆ. ಇದು ಸಂಪೂರ್ಣ ಸುಳ್ಳು ಸುದ್ದಿಯಾಗಿದೆ ಎಂದು ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ.