ಬೆಂಗಳೂರು: ಪಿಎಫ್ ಐ ಸಂಘಟನೆ ನಿಷೇಧ ಮಾಡುವ ಕುರಿತು ಕೇಂದ್ರ ಗೃಹ ಇಲಾಖೆಯೊಂದಿಗೆ ಮುಖ್ಯ ಮಂತ್ರಿ ಬೊಮ್ಮಾಯಿ ಚರ್ಚಿಸಲಿದ್ದಾರೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ತಿಳಿಸಿದರು.
ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಈ ಕುರಿತಂತೆ ಬಸವರಾಜ ಬೊಮ್ಮಾಯಿ ಅವರು ನನ್ನೊಂದಿಗೆ ಚರ್ಚೆ ನಡೆಸಿದ್ದಾರೆ ಎಂದು ತಿಳಿಸಿದರು.
ಪ್ರವೀಣ್ ನೆಟ್ಟಾರ್ ಹತ್ಯೆ ಹಿಂದೆ ಪಿ ಎಫ್ ಐ,ಎಸ್ ಡಿ ಪಿ ಐ ಸಂಘಟನೆಗಳ ಕೈವಾಡ ಇರುವ ಬಗ್ಗೆ ಸಿಎಂ ಬೊಮ್ಮಾಯಿ ಶಂಕೆ ವ್ಯಕ್ತಪಡಿಸಿದ್ದಾರೆ ಎಂದು ಹೇಳಿದರು.
ಈ ಎರಡೂ ಚಟುವಟಿಕೆಗಳ ಮೇಲೆ ರಾಷ್ಟ್ರಮಟ್ಟದಲ್ಲಿ ನಿಗಾ ಇಡಬೇಕಾಗಿದೆ.ಈ ಸಂಘಟನೆಗಳನ್ನ ರಾಷ್ಟ್ರಮಟ್ಟದಲ್ಲಿ ಬ್ಯಾನ್ ಮಾಡಬೇಕು ಎಂಬ ಅಭಿಪ್ರಾಯ ಸಿಎಂ ಬಸವರಾಜ್ ಬೊಮ್ಮಾಯಿ ಅವರದ್ದಾಗಿದೆ ಎಂದು ಜೋಶಿ ಹೇಳಿದರು.
ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರದ ಗೃಹ ಇಲಾಖೆಯ ಜೊತೆ ಚರ್ಚೆ ನಡೆಸುವುದಾಗಿ ನನ್ನ ಜೊತೆ ಮಾತನಾಡುವಾಗ ತಿಳಿಸಿದ್ದಾರೆ ಎಂದರು.

