ಉತ್ತರ ಕನ್ನಡ: ವರುಣನ ಆರ್ಭಟಕ್ಕೆ ಮನೆಯ ಮೇಲೆ ಗುಡ್ಡ ಕುಸಿದು ಒಂದೇ ಕುಟುಂಬದ ನಾಲ್ಕು ಜನ ಮೃತಪಟ್ಟಿರುವ ಘಟನೆ ಉತ್ತರ ಕನ್ನಡ ಜಿಲ್ಲೆ ಭಟ್ಕಳ ತಾಲೂಕಿನ ಮುಟ್ಟಳ್ಳಿಯಲ್ಲಿ ನಡೆದಿದೆ.
ಲಕ್ಷ್ಮಿ ನಾರಾಯಣ ನಾಯ್ಕ, ಅನಂತ ನಾರಾಯಣ ನಾಯ್ಕ್, ಲಕ್ಷ್ಮಿ, ಪ್ರವೀಣ್ ಮೃತಪಟ್ಟ ದುರ್ದೈವಿಗಳು.
ರಾತ್ರಿಯಿಂದ ಸುರಿದ ಧಾರಾಕಾರ ಮಳೆಗೆ ಮನೆಯ ಮೇಲೆ ಗುಡ್ಡ ಕುಸಿದ ಕಾರಣ
ಮನೆ ಸಂಪೂರ್ಣ ನೆಲಸಮವಾಗಿದೆ.
ಜೆಸಿಬಿ ಮೂಲಕ ಮಣ್ಣು ತೆಗೆಯುವ ಕೆಲಸ ನಡೆಯುತ್ತಿದೆ. ಅಗ್ನಿಶಾಮಕ ಸಿಬ್ಬಂದಿ, ಪೊಲಿಸರು ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ನಡೆಸಿದರು ಆದರೆ ಮನೆಯೊಳಗಿದ್ದ ನಾಲ್ವರು ಮೃತಪಟ್ಟಿದ್ದಾರೆ.

