ಸಿಎಂಗೆ ಕೊರೊನಾ: ಆರೋಗ್ಯ ವಿಚಾರಿಸಿದ ಬಿ.ಎಸ್.ವೈ

ಬೆಂಗಳೂರು: ಮುಖ್ಯಮಂತ್ರಿ‌ ಬಸವರಾಜ ಬೊಮ್ಮಾಯಿ ಅವರಿಗೆ ಕೋವಿಡ್ ಸೋಂಕು ದೃಢಪಟ್ಟಿದ್ದು ಅವರು ವಿಶ್ರಾಂತಿ ತೆಗೆದುಕೊಳ್ಳುತ್ತಿದ್ದಾರೆ.

ಸಿಎಂ ಗೆ ಕೊರೊನಾ ದೃಢಪಟ್ಟ ಹಿನ್ನೆಲೆಯಲ್ಲಿ ನಿಕಟಪೂರ್ವ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ದೂರವಾಣಿ ಮೂಲಕ ಸಿಎಂ ಬೊಮ್ಮಾಯಿ ಅವರ ಆರೋಗ್ಯ ವಿಚಾರಿಸಿದರು.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಕೋವಿಡ್ ಸೋಂಕು ದೃಢ ಪಟ್ಟಿದ್ದರಿಂದ ತಮ್ಮ ಆರ್.ಟಿ ನಗರದ ನಿವಾಸದಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾರೆ.

ಬಿ.ಎಸ್ ಯಡಿಯೂರಪ್ಪ,  ಸಚಿವರಾದ ಡಾ. ಅಶ್ವತ್ ನಾರಾಯಣ್ , ಹಾಲಪ್ಪ ಆಚಾರ್, ಪ್ರಭು ಚೌಹಾಣ್, ಬಿ.ಸಿ ನಾಗೇಶ್  ಅವರುಗಳು ಬಸವರಾಜ ಬೊಮ್ಮಾಯಿ ಅವರಿಗೆ ದೂರವಾಣಿ ಕರೆ ಮಾಡಿ ಆರೋಗ್ಯ ವಿಚಾರಿಸಿದರು.