ಶೂ ಧರಿಸಿ ಗಜಪಡೆಗೆ ಪೂಜೆ ಸಲ್ಲಿಸಿದ ಸಚಿವ ಉಮೇಶ್ ಕತ್ತಿ

ಮೈಸೂರು,ಆ. 7- ವಿಶ್ವ ವಿಖ್ಯಾತ ಮೈಸೂರು ದಸರಾ ಗಜಪಡೆ ಪೂಜೆ ಸಂದರ್ಭದಲ್ಲಿ ಅರಣ್ಯ ಸಚಿವ ಉಮೇಶ್ ಕತ್ತಿ ಶೂ ಧರಿಸಿ ಪೂಜೆ ಸಲ್ಲಿಸಿದ್ದಾರೆ.

ಗಜ ಪಡೆ ಪೂಜಾ ಕಾರ್ಯಕ್ರಮದಲ್ಲಿ ಭಾಗವಹಿಸಿದ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.‌ ಟಿ. ಸೋಮಶೇಖರ್‌  ಸೇರಿದಂತೆ ಇತರ ಗಣ್ಯರು ಬರಿಗಾಲಿನಲ್ಲಿ ಪೂಜೆ ಸಲ್ಲಿಸಿದರೆ ಉಮೇಶ್ ಕತ್ತಿ ಮಾತ್ರ ಶೂ ಧರಿಸಿ ಪೂಜೆ ಮಾಡಿದರು.

ಸಂಪ್ರದಾಯವಾಗಿ ಪೂಜೆ ಸಲ್ಲಿಸುವಾಗ ಚಪ್ಪಲಿ,ಶೂ ಧರಿಸುವುದಿಲ್ಲ.

ಆದರೆ ಸಚಿವ ಉಮೇಶ್ ಕತ್ತಿ ಶೂ ಧರಿಸಿಯೇ ಗಜ ಪಡೆಗೆ ಪೂಜೆ ಸಲ್ಲಿಸುವ ಮೂಲಕ ಸಾರ್ವಜನಿಕವಾಗಿ ಟೀಕೆಗೆ ಗುರಿಯಾಗಿದ್ದಾರೆ.