ಸಿಎಂ ಕುರ್ಚಿ ಮೇಲೆ ಕತ್ತಿ ಕಣ್ಣು

ಮಳವಳ್ಳಿ: ಮುಂದಿನ ವಿಧಾನ ಸಭಾ ಚುನಾವಣೆಯಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲಿದ್ದು,ನಾನೂ ಸಹಾ ಮುಖ್ಯಮಂತ್ರಿ ಸ್ಥಾನದ ಅಕಾಂಕ್ಷಿ ಎಂದು ಸಚಿವ ಉಮೇಶ್ ವಿ.ಕತ್ತಿ ತಿಳಿಸಿದರು.

ಮಾಧ್ಯಮ ಪ್ರತಿ ನಿಧಿಗಳೊಂದಿಗೆ  ಮಾತನಾಡಿದ ಅವರು, ಮುಖ್ಯಮಂತ್ರಿ ಬದಲಾವಣೆ ಕೇವಲ ಊಹಾಪೋಹ ಮುಖ್ಯಮಂತ್ರಿ ಬಸವರಾಜು ಬೊಮ್ಮಯಿ ಅವರ ನೇತೃತ್ವದಲ್ಲೇ ಮುಂದಿನ ಚುನಾವಣೆ ಎದುರಿಸುತ್ತೇವೆ ಎಂದು ಹೇಳಿದರು.

ನಾನು 8 ಬಾರಿ ಶಾಸಕನಾಗಿ ಆಯ್ಕೆಯಾಗಿ, ಹಲವು ಖಾತೆಗಳ ಸಚಿವನಾಗಿ ಕರ್ತವ್ಯ ನಿರ್ವಹಿಸಿದ್ದೇನೆ.

ಮುಖ್ಯಮಂತ್ರಿಯಾಗಿ ನಾಡಿನ ಜನರ ಸೇವೆ ಸಲ್ಲಿಸುವ ಹಂಬಲ ಹೊಂದಿದ್ದೇನೆ ಎಂದು ತಿಳಿಸಿದರು.

ಯಡಿಯೂರಪ್ಪ ನಮ್ಮ ಪಕ್ಷದ ಹಿರಿಯ ನಾಯಕರಾಗಿದ್ದಾರೆ. ಅವರನ್ನು ಎಂದಿಗೂ ಕಡೆಗಣಿಸಿಲ್ಲ ಎಂದರು.

ಮೇಕೆದಾಟು ಯೋಜನೆ ಜಾರಿ ಮಾಡಲು ತಮಿಳುನಾಡು ಸರ್ಕಾರ ಅವಕಾಶ ಮಾಡಿಕೊಡಬೇಕು.

ಬೆಂಗಳೂರು ನಗರಕ್ಕೆ ಕುಡಿಯುವ ನೀರಿನ ಸಮಸ್ಯೆ ಹೆಚ್ಚಾಗಿರುವುದರಿಂದ ಮೇಕೆದಾಟು ಯೋಜನೆ ಜಾರಿಗೆ ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಲಾಗುವುದು ಎಂದು ಕತ್ತಿ ಹೇಳಿದರು.