ಬೆಂಗಳೂರು: ಭ್ರಷ್ಟಾಚಾರ ನಿಗ್ರಹ ದಳವನ್ನು ರದ್ದು ಪಡಿಸಿ ಹೈಕೋರ್ಟ್ ನೀಡಿರುವ ತೀರ್ಪಿನ ಕುರಿತು ಕಾನೂನು ತಜ್ಞರ ಜೊತೆ ಚರ್ಚಿಸಿ ಮುಂದಿನ ಕ್ರಮ ತೆಗೆದುಕೊಳ್ಳಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಯಿ ಅವರು ತಿಳಿಸಿದರು.
ಮಾಧ್ಯಮ ಪ್ರತಿ ನಿಧಿಗಳೊಂದಿಗೆ ಮಾತನಾಡಿದ ಅವರು,ಗುರುವಾರ ಹೈಕೋರ್ಟ್ ನ ದ್ವೀಸದಸ್ಯ ಪೀಠವು ಎಸಿಬಿಯನ್ನು ರದ್ದುಪಡಿಸಿದೆ ಎಂದು ಹೇಳಿದರು.
ಎಸಿಬಿಯಲ್ಲಿನ ಪ್ರಕರಣಗಳನ್ನು ಲೋಕಾಯುಕ್ತಕ್ಕೆ ವರ್ಗಾವಣೆ ಮಾಡಿದೆ. ಈ ತೀರ್ಪಿನ ಪೂರ್ಣ ಆದೇಶ ಬಂದ ನಂತರ ಕಾನೂನು ಸಚಿವರು ಹಾಗೂ ಕಾನೂನು ತಜ್ಞರ ಜೊತೆ ಚರ್ಚಿಸಿ ಮುಂದಿನ ನಿರ್ದಾರ ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದರು.
ನಮ್ಮ ಪಕ್ಷದ ಪ್ರಣಾಳಿಕೆ ಗಮನದಲ್ಲಿಟ್ಟುಕೊಂಡು ಹೈಕೋರ್ಟ್ ಆದೇಶ ಕೊಟ್ಟಿರುವುದನ್ನು ಗಮನಿಸಿದೆ.
ನಮ್ಮ ಪಕ್ಷದ ಪ್ರಣಾಳಿಕೆ ಮೂಲ ಪ್ರತಿ ತೆಗೆದುಕೊಂಡು ಚರ್ಚೆ ಮಾಡುತ್ತೇವೆ.ಮುಂದೆ ಏನು ಮಾಡಬಹುದು
ಎಂಬುದರ ಬಗ್ಗೆ ನಿರ್ಧರಿಸುತ್ತೇವೆ ಎಂದರು.
ಖ್ಯಾತ ಸುಗಮ ಸಂಗೀತ ಗಾಯಕ ಶಿವಮೊಗ್ಗ ಸುಬ್ಬಣ್ಣ ನಮ್ಮನ್ನ ಅಗಲಿರೋದು ಬಹಳ ದುಃಖಕರ ಸಂಗತಿ ಎಂದು ಸಿಎಂ ಹೇಳಿದರು.
ಸುಬ್ಬಣ್ಣನವರು ಸಾಹಿತ್ಯ, ಸಂಗೀತ, ಹಾಡುಗಾರಿಕೆ ಎಲ್ಲದರಲ್ಲೂ ಮುಂಚೂಣಿಯಲ್ಲಿದ್ದರು.ಹಲವು ಪ್ರಶಸ್ತಿಗೆ ಭಾಜನರಾದವರು ಎಂದು ಇದೇ ವೇಳೆ ಬೊಮ್ಮಾಯಿ ಸ್ಮರಿಸಿದರು.

