ವಿವಾದಾತ್ಮಕ ಹೇಳಿಕೆ ನೀಡಿ ಬಿಜೆಪಿಗರ ಕೆಂಗಣ್ಣಿಗೆ ಗುರಿಯಾದ ಪ್ರಿಯಾಂಕ್ ಖರ್ಗೆ

ಬೆಂಗಳೂರು: ಶಾಸಕ ಹಾಗೂ ಕಾಂಗ್ರೆಸ್ ಮುಖಂಡ ಪ್ರಿಯಾಂಕ್ ಖರ್ಗೆ‌ ವಿವಾದಾತ್ಮಕ ಹೇಳಿಕೆ ನೀಡಿ ಬಿಜೆಪಿ ನಾಯಕರ ಕೆಂಗಣ್ಣಿಗೆ ಗುರಿಯಾಗಿದ್ದಾರೆ.

ಯಾವುದೋ ಕಾರಣಕ್ಕೆ‌ ಸುದ್ದಿಗೋಷ್ಠಿ ಹಮ್ಮಿಕೊಂಡಿದ್ದ ಪ್ರಿಯಾಂಕ್ ಖರ್ಗೆ ಸರ್ಕಾರದ ವಿರುದ್ಧ ಮಾತನಾಡುವ ಭರದಲ್ಲಿ ವಿವಾದಾತ್ಮಕ ಹೇಳಿಕೆ ನೀಡಿದರು.

ಈ‌ ಸರ್ಕಾರದಲ್ಲಿ ಯುವತಿಯರಿಗೆ ಕೆಲಸ ಸಿಗಬೇಕಾದರೆ ಮಂಚ ಏರಬೇಕು,ಯುವಕರಿಗೆ ಕೆಲಸ ಸಿಗಬೇಕಾದರೆ ಲಂಚ ಕೊಡಬೇಕು ಇದೊಂದು ಲಂಚ-ಮಂಚದ ಸರ್ಕಾರ ಎಂದು ವಾಗ್ದಾಳಿ ನಡೆಸಿದರು.

ಹೇಳಿಕೆ ಗಮನಿಸುತ್ತಿದ್ದಂತೆ ಬಿಜೆಪಿ ನಾಯಕರು ಪ್ರಿಯಾಂಕ್ ಖರ್ಗೆ ವಿರುದ್ಧ ತಿರುಗಿ ಬಿದ್ದಿದ್ದಾರೆ.

ಪ್ರಿಯಾಂಕ್ ಖರ್ಗೆಯವರ ತಂದೆ ರಾಜ್ಯ ಹಾಗೂ ಕೇಂದ್ರ ಸರ್ಕಾರದಲ್ಲಿ ಸಚಿವರಾಗಿದ್ದವರು.ಹಾಗಾದರೆ ಅವರ ಕಾಲದಲ್ಲೂ ಹೀಗೆಲ್ಲಾ ಆಗಿತ್ತಾ ಎಂದು ಕಿಡಿಕಾರಿದ್ದಾರೆ.

ಪ್ರಿಯಾಂಕ್ ಖರ್ಗೆ ಅವರಿಗೆ ಕನಿಷ್ಟ ಜ್ಞನವೂ ಇದ್ದಂತಿಲ್ಲ.ನಾಚಿಕೆ,ಮಾನ,ಮರ್ಯಾದೆ ಯಾವುದೂ ಇಲ್ಲ.ಅದಕ್ಕೇ ಈ ರೀತಿ ಉದ್ದಟತನದ ಹೇಳಿಕೆ ನೀಡಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.