ಪ್ರಿಯಾಂಕ್ ಖರ್ಗೆ ಕ್ಷಮೆಯಾಚನೆಗೆ ಪ್ರಹ್ಲಾದ್ ಜೋಶಿ ಆಗ್ರಹ

ಹುಬ್ಬಳ್ಳಿ: ನೌಕರಿ ಪಡೆಯಲು ಯುವತಿಯರು ಮಂಚ ಹತ್ತಬೇಕು, ಯುವಕರು ಲಂಚ ಕೊಡಬೇಕು ಎಂಬ ವಿವಾದಾತ್ಮಕ ಹೇಳಿಕೆ ನೀಡಿದ್ಧ ಶಾಸಕ ಪ್ರಿಯಾಂಕ್ ಖರ್ಗೆ ವಿರುದ್ಧ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಕಿಡಿಕಾರಿದ್ದಾರೆ.

ಈ ಕುರಿತು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಜೋಶಿ, ಪ್ರಿಯಾಂಕ್ ಖರ್ಗೆ ಹೇಳಿಕೆ ಕೀಳು ಅಭಿರುಚಿ ತೋರುತ್ತದೆ. ಮಹಿಳೆಯರ ವಿರುದ್ಧ ಈ ಮಾತು ಬಳಕೆಯಾಗಬಾರದು ಎಂದು ಹೇಳಿದರು.

ಯಾವ ಮಹಿಳೆಯೂ ಈ ಹೇಳಿಕೆಯನ್ನ ಸಹಿಸಲ್ಲ.  ಪ್ರಿಯಾಂಕ್ ಖರ್ಗೆ ಮಹಿಳಾ ಕುಲಕ್ಕೆ ಅಪಮಾನ ಮಾಡಿದ್ದಾರೆ. ಹೀಗಾಗಿ ಮಹಿಳಾ ಸಮುದಾಯದ ಕ್ಷಮೆ ಕೇಳಬೇಕು ಎಂದು ಆಗ್ರಹಿಸಿದರು.

ಪ್ರಿಯಾಂಕ್ ಖರ್ಗೆ ಹೇಳಿಕೆ ಕಾಂಗ್ರೆಸ್ ಪಕ್ಷದ  ಹಿನಾಯ  ಸ್ಥಿತಿ ತೋರಿಸುತ್ತದೆ. ಅವರು ತಮ್ಮ ತಂದೆ ನೋಡಿ ಕಲಿಯಬೇಕು. ಶಕ್ತಿ ಇದ್ದರೆ ಮುಂದಿನ ಚುನಾವಣೆಯಲ್ಲಿ ಗೆಲ್ಲಲು ಯತ್ನಿಸಲಿ ಎಂದು ಪ್ರಹ್ಲಾದ್ ಜೋಶಿ ಹೇಳಿದರು.