ದೇಶದ ಸ್ವಾತಂತ್ರಕ್ಕಾಗಿ ತ್ಯಾಗ,ಬಲಿದಾನ ಮಾಡಿದ ಹಿರಿಯರನ್ನು ನೆನೆಯೋಣ –ಎಸ್.ಟಿ.ಎಸ್.

ಮೈಸೂರು: ದೇಶದ ಸ್ವಾತಂತ್ರಕ್ಕಾಗಿ ಹೋರಾಟ, ತ್ಯಾಗ, ಬಲಿದಾನಗಳನ್ನು ಮಾಡಿದ ಹಿರಿಯರನ್ನು ನಾವೆಲ್ಲ ನೆನಪು ಮಾಡಿಕೊಳ್ಳಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಹೇಳಿದರು.
ಮೈಸೂರಿನ ಪಂಜಿನ ಕವಾಯತು ಮೈದಾನದಲ್ಲಿ 75ನೆ‌ ಸ್ವಾತಂತ್ರ್ಯ ಅಮೃತ ಮಹೋತ್ಸವ ಉದ್ಘಾಟನೆ ಮಾಡಿ ಅವರು ಮಾತನಾಡಿದರ
ಸ್ವಾತಂತ್ರ್ಯ ಹೋರಾಟಗಾರರ ಆಶಯದಂತೆ ನಮ್ಮ ಸರ್ಕಾರ ಕೆಲಸ ಮಾಡುತ್ತಿದೆ, ನಮ್ಮದು ಜನಪರ ಸರ್ಕಾರ,ನಾಡಿನ ಜನತೆಯ ಶ್ರೇಯೋಭಿವೃದ್ಧಿಯೇ ನಮ್ಮ ಆದ್ಯ ಕರ್ತವ್ಯ ಎಂದು ಹೇಳಿದರು.
ಚುನಾವಣಾ ಪ್ರಣಾಳಿಕೆಯಲ್ಲಿ ನಾಡಿನ ಜನತೆಗೆ ನೀಡಿರುವ ಭರವಸೆಯಂತೆ ಸಮೃದ್ಧ ಕರ್ನಾಟಕವನ್ನು ನಿರ್ಮಿಸಲು ಹಲವಾರು ಯೋಜನೆಗಳನ್ನು ರೂಪಿಸಿ, ಅನುಷ್ಠಾನಕ್ಕೆ ತಂದಿದ್ದೇವೆ ಎಂದು ತಿಳಿಸಿದರು.
ಭಾರತದ ಸ್ವಾತಂತ್ರ್ಯ ದಿನಾಚರಣೆಯನ್ನು ಭಾರತೀಯರಾದ ನಾವೆಲ್ಲ ಸಂಭ್ರಮ ಸಡಗರದಿಂದ ಆಚರಿಸುತ್ತಿದ್ದೇವೆ
ಈ ಶುಭ ಸಂದರ್ಭದಲ್ಲಿ ನಾಡಿನ ಸಮಸ್ತ ನಾಗರಿಕರು, ಹಿರಿಯ ಸ್ವಾತಂತ್ರ್ಯ ಹೋರಾಟಗಾರರು, ಎಲ್ಲಾ ಜನಪ್ರತಿನಿಧಿಗಳು, ಅಧಿಕಾರಿ, ನೌಕರರು ಹಾಗೂ ಮಾಧ್ಯಮ ಸ್ನೇಹಿತರಿಗೆ ಸ್ವಾತಂತ್ರ್ಯ ದಿನಾಚರಣೆಯ ಶುಭಾಶಯಗಳನ್ನು  ಸೋಮಶೇಖರ್ ತಿಳಿಸಿದ
ಮೈಸೂರು ಜಿಲ್ಲೆಗೆ ನಮ್ಮ ಸರ್ಕಾರ ವಿಶೇಷ ಗಮನ ಹರಿಸಿದೆ.  ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಮೈಸೂರಿಗೆ ಬಂದು ಅಂತಾರಾಷ್ಟ್ರೀಯ ಯೋಗ ದಿನಾಚರಣೆಯನ್ನು ಆಚರಿಸಿದರು.
ಆ ಮೂಲಕ ನಮ್ಮ ಮೈಸೂರನ್ನು ಇಡೀ ವಿಶ್ವವೇ ಗಮನ ಸೆಳೆಯುವಂತೆ ಮಾಡಿದರು ಎಂದು ಸಚಿವರು ತಿಳಿಸಿದರು.
ಮೈಸೂರು-ಬೆಂಗಳೂರು ಎಕ್ಸ್ಪ್ರೆಸ್‌ವೇ ದಶಪಥ ಕಾಮಗಾರಿಯು ತ್ವರತಿಗತಿಯಲ್ಲಿ ಸಾಗಿದ್ದು, ಈ ವರ್ಷದ ಅಂತ್ಯಕ್ಕೆ ಪೂರ್ಣಗೊಳ್ಳಲಿದೆ. ಇದರಿಂದ ಬೆಂಗಳೂರು ಮತ್ತು ಮೈಸೂರು ನಡುವೆ ಸಂಚಾರ ಅತ್ಯಂತ ಸುಗಮವಾಗಲಿದೆ ಎಂದು ತಿಳಿಸಿದರು. 
ಮೈಸೂರು ತಾಲ್ಲೂಕಿನ ವ್ಯಾಪ್ತಿಯಲ್ಲಿ 3 ಏತ ನೀರಾವರಿ ಯೋಜನೆಗಳು ಹಾಗೂ ಹುಣಸೂರು, ಕೆ.ಆರ್.ನಗರ, ಟಿ.ನರಸೀಪುರ, ಪಿರಿಯಾಪಟ್ಟಣ ಮತ್ತು ಹೆಚ್.ಡಿ ಕೋಟೆ ತಾಲ್ಲೂಕಿನ ವ್ಯಾಪ್ತಿಯಲ್ಲಿ ಏತ ನೀರಾವರಿ ಯೋಜನೆಗಳ ಮೂಲಕ ಕೆರೆಗಳಿಗೆ ನೀರು ತುಂಬಿಸುವ ಕಾಮಗಾರಿ ಪ್ರಗತಿಯಲ್ಲಿದೆ ಎಂದು ತಿಳಿಸಿದರು.
ಮೈಸೂರು ವಿಶ್ವವಿದ್ಯಾನಿಲಯದ ಆವರಣದಲ್ಲಿ ಲೋಕೋಪಯೋಗಿ ಇಲಾಖೆ ವತಿಯಿಂದ ಮೊಟ್ಟ ಮೊದಲ ಬಾರಿಗೆ 1 ಸಾವಿರ ವಿದ್ಯಾರ್ಥಿಗಳಿಗೆ ಸೌಲಭ್ಯ ಕಲ್ಪಿಸುವ ಪಂಡಿತ್ ದೀನದಯಾಳ್ ಉಪಾಧ್ಯಾಯ ಸೌಹಾರ್ದ ಬಹುಮಹಡಿ ವಿದ್ಯಾರ್ಥಿ ನಿಲಯವನ್ನು ನಿರ್ಮಿಸಲಾಗುವುದು ಎಂದು ಹೇಳಿದರು.
2021ರಲ್ಲಿ ಸುರಿದ ಭಾರಿ ಮಳೆಯಿಂದ ಚಾಮುಂಡಿ ಬೆಟ್ಟದಲ್ಲಿ ಭೂ ಕುಸಿತ ಉಂಟಾಗಿದ್ದುದನ್ನು ಭಾರತೀಯ ವಿಜ್ಞಾನ ಸಂಸ್ಥೆಯು ಕೊಟ್ಟಿರುವ ತಂತ್ರಜ್ಞಾನವನ್ನು ಅಳವಡಿಸಿಕೊಂಡು 9.75 ಕೋಟಿ ವೆಚ್ಚದಲ್ಲಿ 350 ಮೀಟರ್ ಉದ್ದ ರಸ್ತೆ ದುರಸ್ತಿಗೆ ಕ್ರಮವಹಿಸಲಾಗಿದೆ ಎಂದು ಹೇಳಿದರು.
ಮೈಸೂರು ನಗರಾಭಿವೃದ್ದಿ ಪ್ರಾಧಿಕಾರದ ವತಿಯಿಂದ ವಿಜಯನಗರ ಮತ್ತು ದಟ್ಟಗಳ್ಳಿ ಬಡಾವಣೆಗಳಲ್ಲಿ ಗುಂಪು ವಸತಿ ಯೋಜನೆಗೆ ಕಾಯ್ದಿರಿಸಲಾದ ಜಾಗಗಳಲ್ಲಿ 2 ಕೊಠಡಿಯ 890 ಮನೆಗಳನ್ನು ನಿರ್ಮಿಸಲು ಒಟ್ಟು 252 ಕೋಟಿ ರೂ.ಗಳಿಗೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಸೋಮಶೇಖರ್ ವಿವರಿಸಿದರ
ಮೈಸೂರು ಮೆಡಿಕಲ್ ಕಾಲೇಜು ಮತ್ತು ಈ ಕಾಲೇಜಿನ ವ್ಯಾಪ್ತಿಗೆ ಒಳಪಡುವ ಕೆ.ಆರ್.ಆಸ್ಪತ್ರೆ, ಚೆಲುವಾಂಬ ಆಸ್ಪತ್ರೆ ಮುಂತಾದವುಗಳ ಅಭಿವೃದ್ಧಿಗೆ 2022-23ನೇ ಸಾಲಿನ ಆಯವ್ಯಯದಲ್ಲಿ 89.9 ಕೋಟಿ ರೂ.ಗಳ ಅನುದಾನವನ್ನು ಒದಗಿಸಲಾಗಿದೆ.
ಮೈಸೂರು ವಿಮಾನ ನಿಲ್ದಾಣದ ರನ್‌ವೇ ವಿಸ್ತರಣೆ ಸಂಬಂಧ 319 ಕೋಟಿ ರೂ.ಗಳ ಅನುದಾನವನ್ನು ಆಯವ್ಯಯದಲ್ಲಿ ಒದಗಿಸಲಾಗಿದೆ ಎಂದು ತಿಳಿಸಿದರು.
ಭಾರತ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಭಾಗವಾಗಿ ಹಮ್ಮಿಕೊಂಡಿದ್ದ ಹರ್ ಘರ್ ತಿರಂಗ ಅಭಿಯಾನ ಮೈಸೂರು ಜಿಲ್ಲೆಯಲ್ಲಿ ಯಶಸ್ವಿಯಾಗಿದ್ದು ಈ ಅಭಿಯಾನದಲ್ಲಿ ಭಾಗವಹಿಸಿದ ಎಲ್ಲರಿಗೂ ಅಭಿನಂದನೆ ಸಲ್ಲಿಸುತ್ತೇನೆ ಎಂದು ಸೋಮಶೇಖರ್ ತಿಳಿಸಿದರು.