ಬೆಂಗಳೂರು: ಸಾಮೂಹಿಕ ನಾಯಕತ್ವದಲ್ಲೇ ಮುಂಬರುವ ವಿಧಾನಸಭೆ ಚುನಾವಣೆ ಎದುರಿಸುತ್ತೇವೆ ಎಂದು ಮಾಜಿ ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಘೋಷಿಸಿದರು.
ಅಮೃತ ಭಾರತೊಗೆ ಕರುನಾಡ ಕೊಡುಗೆ ಬಿಜೆಪಿ ರ್ಯಾಲಿಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ಬಿಜೆಪಿ ಸಾಮೂಹಿಕ ನಾಯಕತ್ವದಲ್ಲೇ ಈ ಬಾರಿಯ ಚುನಾವಣೆ ಎದುರಿಸಲಿದೆ.ಇದರಲ್ಲಿ ಯಾರಿಗೂ ಅನುಮಾನ ಬೇಡ ಎಂದು ಹೇಳಿದರು.
ಈ ಬಾರಿ ಚುನಾವಣೆಯಲ್ಲಿ ಬಿಜೆಪಿಗೆ ಬಹುಮತ ಬರಲಿದ್ದು ನಮ್ಮ ಪಕ್ಷವೇ ಅಧಿಕಾರ ಹಿಡಿಯಲಿದೆ ಎಂದು ಯಡಿಯೂರಪ್ಪ ಭವಿಷ್ಯ ನುಡಿದರು.
ರಾಜ್ಯಾದ್ಯಂತ ಪ್ರವಾಸ ಮಾಡಿ ಕಾಂಗ್ರೆಸ್ ಬಣ್ಣ ಬಯಲು ಮಾಡುತ್ತೇನೆ, ಆ ಪಕ್ಷ ಏನೇ ಮಾಡಿದರೂ ಮತ್ತೆ ಅಧಿಕಾರಕ್ಕೆ ಬರಲಾರದು ಎಂದು ಬಿಎಸ್‌ವೈ ಹೇಳಿದರು.

