ಬೆಂಗಳೂರು: ಕಾಂಗ್ರೆಸ್ ಪಕ್ಷ ಹಮ್ಮಿಕೊಂಡಿರುವ ಸ್ವಾತಂತ್ರ್ಯೊತ್ಸವ ನಡಿಗೆ ಕಾರ್ಯಕ್ರಮಕ್ಕೆ ರಾಜ್ಯಾದ್ಯಂತ ಜನಸಾಹರವೇ ಹರಿದು ಬಂದಿದೆ.
ದೇಶದ ಸ್ವಾತಂತ್ರ್ಯ ತಂದುಕೊಡಲು ತ್ಯಾಗ,ಬಲಿದಾನ ಮಾಡಿದ ಮಹನೀಯರನ್ನು ನೆನೆಯಲು ಕಾಂಗ್ರೆಸ್ ಈ ನಡಿಗೆಯನ್ನು ಪಕ್ಷಾತೀತವಾಗಿ ಹಮ್ಮಿಕೊಂಡಿರುವುದಾಗಿ ಹೇಳಿದ್ದು ಯಾರು ಬೇಕಾದರೂ ನಡಿಗೆಯಲ್ಲಿ ಭಾಗಿಯಾಗಬಹುದು ಎಂದು ಹೇಳಿದೆ.
ಕಾರ್ಯಕರ್ತರು ಬರಲು ಬೆಂಗಳೂರಿನಲ್ಲಿ ಮೆಟ್ರೋ ರೈಲು ವ್ಯವಸ್ಥೆ ಮಾಡಿದ್ದರಿಂದ ಎಲ್ಲಾ ಮೆಟ್ರೋ ಸ್ಟೇಷನ್ ಗಳು ಫುಲ್ ಭರ್ತಿಯಾಗಿದ್ದವು.
ಕಾರ್ಯಕರ್ತರನ್ನು ಮೆಟ್ರೋ ರೈಲು ನಿಲ್ದಾಣ ದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಬರಮಾಡಿಕೊಂಡರು.
ಶಾಲಾ,ಕಾಲೇಜು ವಿದ್ಯಾರ್ಥಿಗಳು ಕೂಡಾ ನಡಿಗೆಯಲ್ಲಿ ಪಾಲ್ಗೊಂಡು ಭಾರತ್ ಮಾತಾ ಕಿ ಜೈ ಎಂಬ ಘೋಷಣೆ ಮೊಳಗಿಸಿದರು.
ಸಂಗೊಳ್ಳಿ ರಾಯಣ್ಣ ಪ್ರತಿಮೆ ಬಳಿಯಿಂದ ಕಾಂಗ್ರೆಸ್ ಪಾದಯಾತ್ರೆ ಪ್ರಾರಂಭವಾಗಿ ಕೆ ಆರ್ ವೃತ್ತದ ಮೂಲಕ ಸಾಗಿ ನ್ಯಾಷನಲ್ ಕಾಲೇಜು ಮೈದಾನ ತಲುಪಿತು.
ಟ್ರಾಫಿಕ್ ಜಾಮ್- ಒಂದು ಕಡೆ ಕಾಂಗ್ರೆಸ್ ಪಾದಯಾತ್ರೆ, ಮತ್ತೊಂದು ಕಡೆ ಸ್ವಾತಂತ್ರ್ಯ ಭಾರತಿಗೆ ಕರುನಾಡ ಜಾತ್ರೆ.ಬಿಜೆಪಿ ರ್ಯಾಲಿ ಯಿಂದಾಗಿ ಬೆಂಗಳೂರಿನ ಬಹುತೇಕ ರಸ್ತೆಗಳು ಜನದಟ್ಟಣೆ ಹಾಗೂ ವಾಹನ ದಟ್ಟಣೆಯಿಂದ ತುಂಬಿ ಹೋಗಿತ್ತು. ಟ್ರಾಫಿಕ್ ಜಾಮ್ ನಿಂದಾಗಿ ಜನತೆ ಹೈರಾಣದರು.

