ಬೆಂಗಳೂರು: ಶಾಲೆಗಳಲ್ಲಿ ಗಣೇಶೋತ್ಸವಕ್ಕೆ ಮುಕ್ತ ಅವಕಾಶ ಎಂಬ ಶಿಕ್ಷಣ ಸಚಿವ ನಾಗೇಶ್ ಹೇಳಿಕೆ ಈಗ ಹೊಸ ವಿವಾದ ಹುಟ್ಟು ಹಾಕಿದೆ.
ಶಿಕ್ಷಣ ಸಚಿವರ ಹೇಳಿಕೆಗೆ ಪರೋಕ್ಷವಾಗಿ ಟಾಂಗ್ ಕೊಟ್ಟಿರುವ ವಕ್ಫ್ ಬೋರ್ಡ್, ಶಿಕ್ಷಣ ಸಚಿವರ ತೀರ್ಮಾನವನ್ನು ಸ್ವಾಗತಿಸುತ್ತೇವೆ ಎಂದು ಹೇಳಿದೆ.
ಸ್ವಾಗತದ ಜೊತೆಗೆ ಶಿಕ್ಷಣ ಇಲಾಖೆಗೆ ಕೆಲವು ಬೇಡಿಕೆಗಳನ್ನೂ ವಕ್ಫ್ ಬೋರ್ಡ್ ಇಟ್ಟಿದೆ.
ನೀವು ಗಣೇಶ ಉತ್ಸವ ಮಾಡಿ.ನಮ್ಮ ಧಾರ್ಮಿಕ ಹಬ್ಬಗಳ ಆಚರಣೆಗೂ ಅವಕಾಶ ಮಾಡಿಕೊಡಬೇಕು ಎಂದು ಬೇಡಿಕೆ ಇಟ್ಟಿವೆ.
ಒಬ್ಬರಿಗೊಂದು ಬೇಡಾ ಎಲ್ಲಾ ಧರ್ಮದ ಮಕ್ಕಳಿಗೂ ಸಮಾನ ಅವಕಾಶ ಸಿಗಬೇಕು
ಗಣೇಶ ಹಬ್ಬದಂತೆ ಈದ್ ಮಿಲಾದ್ ಹಬ್ಬದ ಆಚರಣೆಗೂ ಅವಕಾಶ ಕೊಡಬೇಕು. ನಮಾಜ್‌ಗೆ ಪ್ರತ್ಯೇಕ ಕೊಠಡಿ ಮೀಸಲಿಡಬೇಕೆಂದು ಮನವಿ ಮಾಡಿದೆ.
ಪ್ರತಿ ಮಕ್ಕಳಿಗೂ ಧರ್ಮದ ಕುರಿತು ಅರಿವು ಮೂಡಿಸಬೇಕು,ನೈತಿಕ ಶಿಕ್ಷಣ ಅಡಿ ಧಾರ್ಮಿಕ ಪಾಠ ಮಕ್ಕಳಿಗೆ ನೀಡಬೇಕು,ಇಸ್ಲಾಮಿಕ್ ಆಚರಣೆಗೂ ಕೂಡಾ ಅವಕಾಶ ಕೊಡಬೇಕು ಎಂದು ವಕ್ಫ್ ಬೋರ್ಡ್ ಅಧ್ಯಕ್ಷ ಶಫಿ ಸಾ ಅದಿ ಮನವಿ ಮಾಡಿದ್ದಾರೆ.
ಶಿಕ್ಷಣ ಸಚಿವರ ಹೇಳಿಕೆ ಇನ್ನೇನು ಹೊಸ,ಹೊಸ ಸಮಸ್ಯೆ ತಂದೊಡ್ಡಲಿದೆಯೋ ಆ ಗಣಪನೇ ಬಲ್ಲ.

