ಥಿಯೇಟರ್ ನಲ್ಲಿ ಸಚಿವರ ಮೋಜು: ಕಾಂಗ್ರೆಸ್ ಟೀಕಾ ಪ್ರಹಾರ

ಬೆಂಗಳೂರು: ನೆರೆಯಿಂದ ಜನ ಸಂಕಷ್ಟದಲ್ಲಿರುವಾಗ ಸಚಿವರು ಸಿನಿಮಾ ಥಿಯೇಟರ್‌ನಲ್ಲಿ ಮೋಜು ಮಾಡುತ್ತಿದ್ದಾರೆ ಎಂದು ಕಾಂಗ್ರೆಸ್ ಟೀಕಿಸಿದೆ.

40 ಪರ್ಸೆಂಟ್  ಸರ್ಕಾರದ ಸಚಿವರನ್ನು ಬೇರೆಲ್ಲೂ ಹುಡುಕುವುದು ಬೇಡ. ಸಿನೆಮಾ ಥಿಯೇಟರ್‌ನಲ್ಲಿ ಹುಡುಕಿದರೆ ಸಾಕು ಸಿಗುತ್ತಾರೆ ಎಂದು ಕಾಂಗ್ರೆಸ್ ಟ್ವೀಟ್ ಮಾಡಿ ಟೀಕಿಸಿದೆ.

ರೈತರು ಅತಿವೃಷ್ಟಿ, ಗೊಬ್ಬರದ ಕೊರತೆಯಂತಹ ಸಮಸ್ಯೆ ಎದುರಿಸುತ್ತಿದ್ದಾರೆ.ಇತ್ತ ಕೃಷಿ ಸಚಿವರು ಸಿನೆಮಾ ವೀಕ್ಷಣೆಯ ಮೋಜಿನಲ್ಲಿದ್ದಾರೆ ಎಂದು ಆಕ್ರೋಶ ವ್ಯಕ್ತ ಪಡಿಸಿದ್ದಾರೆ.

ರೈತರು ಸಾಯುತ್ತಿದ್ದಾರೆ, ಕೃಷಿ ಸಚಿವ ಬಿ.ಸಿ.ಪಾಟೀಲ್, ರೀಲ್ ಲೈಫ್‍ನಿಂದ ರಿಯಲ್ ಲೈಫ್‍ಗೆ ಬರುವುದು ಯಾವಾಗ ಎಂದು ಕಾಂಗ್ರೆಸ್ ಪ್ರಶ್ನಿಸಿದೆ.

ನೆರೆಯಿಂದ ಸಂಕಷ್ಟಕ್ಕೀಡಾದ ಜನರಿಗೆ ಪರಿಹಾರ ನೀಡಿಲ್ಲ, ಜನಪರ ಯೋಜನೆಗಳಿಗೆ ಅನುದಾನವಿಲ್ಲ, ಶೈಕ್ಷಣಿಕ ಕ್ಷೇತ್ರಕ್ಕೆ ಹಣವಿಲ್ಲ, ಆಶಾ, ಅಂಗನವಾಡಿ ಕಾರ್ಯಕರ್ತೆಯರ ವೇತನ ಏರಿಕೆಗೆ ಹಣವಿಲ್ಲ.

ಸರ್ಕಾರಿ ಅಧಿಕಾರಿಗಳ ಕಾರು ಖರೀದಿಯ ಹಣದಲ್ಲಿ ಮಾತ್ರ ಭರ್ಜರಿ ಏರಿಕೆ ಮಾಡಲಾಗಿದೆ ಎಂದು ವ್ಯಂಗ್ಯವಾಡಿದೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಸಲಿ ಮುಖ ಇದು. ಪಪೆಟ್ ಸಿಎಂ ಅಧಿಕಾರಿಗಳಿಗೂ ಕೈಗೊಂಬೆಯಾಗಿದ್ದಾರಾ ಎಂದು ಕಾಂಗ್ರೆಸ್ ಲೇವಡಿ ಮಾಡಿದೆ.