ಬೆಂಗಳೂರು: ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಣೆಗೆ ಅವಕಾಶ ನೀಡಬೇಕೆಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ಮನವಿ ಮಾಡಿದ್ದಾರೆ.
ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಣೆಗೆ ಅವಕಾಶ ನೀಡುವಂತೆ ಚಾಮರಾಜಪೇಟೆ ನಾಗರೀಕ ಒಕ್ಕೂಟ ಶಾಸಕ ಸಿ.ಟಿ ರವಿ ಅವರಿಗೆ ಮನವಿ ಮಾಡಿತ್ತು.
ಈ ಹಿನ್ನೆಲೆಯಲ್ಲಿ ಬಸವರಾಜ ಬೊಮ್ಮಾಯಿಗೆ ಸಿ ಟಿ ರವಿ ಪತ್ರ ಬರೆದು ಅನುಮತಿ ನೀಡುವಂತೆ ಮನವಿ ಮಾಡಿದ್ದಾರ
ನಮಾಜ್ ಗೆ ಅವಕಾಶ ಇದೆ. ಆದರೆ ಗಣೇಶೋತ್ಸವಕ್ಕೆ ಯಾಕೆ ಇಲ್ಲ, ಗಣೇಶೋತ್ಸವ ಆಚರಣೆಗೆ ವಿರೋಧ ಮಾಡುವುದು ಸರಿಯಲ್ಲ.
ಗಣೇಶೋತ್ಸವ ವಿರೋಧಿಸಿದರೆ ಭಾರತದಲ್ಲಿ ಜಾತ್ಯಾತೀತ ವ್ಯವಸ್ಥೆ ವಿರೋಧಿಸಿದಂತೆ . ಹೀಗಾಗಿ ಈದ್ಗಾ ಮೈದಾನದಲ್ಲಿ ಗಣೇಶೋತ್ಸವಕ್ಕೆ ಅವಕಾಶ ನೀಡಬೇಕೆಂದು ಸಿ.ಟಿ.ರವಿ ಕೋರಿದ್ದಾರೆ.

