ಹೃದಯಾಘಾತದಿಂದ ಉಮೇಶ್ ಕತ್ತಿ ನಿಧನ

ಬೆಂಗಳೂರು: ತೀವ್ರ ಹೃದಯಾಘಾತದಿಂದ ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಉಮೇಶ್ ಕತ್ತಿ ಅವರು ನಿಧನರಾಗಿದ್ದಾರೆ.
ಬೆಂಗಳೂರಿನ ಡಾಲಸ್೯ ಕಾಲೋನಿಯಲ್ಲಿರುವ ತಮ್ಮ ಖಾಸಗಿ ನಿವಾಸದಲ್ಲಿ ಉಟ ಮುಗಿಸಿ ಬಾತ್ ರೂಂಗೆ ಹೋಗಿದ್ದ ವೇಳೆ ಹೃದಯಾಘಾತವಾಗಿ ಕುಸಿತು ಬಿದ್ದಿದ್ದರು.
ತಕ್ಷಣ ಅವರನ್ನು ನಗರದ ಎಂ ಎಸ್ ರಾಮಯ್ಯ ಆಸ್ಪತ್ರೆಗೆ ದಾಖಲಿಸಲಾಯಿತು.
ಸುಮಾರು 1 ಗಂಟೆಗಳ ಕಾಲ ನುರಿತ ತಜ್ಞರು ತುರ್ತು ಚಿಕಿತ್ಸಾ ಘಟಕದಲ್ಲಿ ಕತ್ತಿ ಅವರನ್ನು ಉಳಿಸಿಕೊಳ್ಳಲು ಪ್ರಯತ್ನಿಸಿದರೂ ಪ್ರಯೋಜನವಾಗಲಿಲ್ಲ.
ಸುಮಾರು 11.45 ಕ್ಕೆ ಅವರು  ನಿಧನರಾದರು‌ ಎಂದು ವೈದ್ಯರು ಪ್ರಕಟಿಸಿದರು.
ಪತ್ನಿ, ಮಕ್ಕಳು, ಸಹೋದರ ಸೇರಿದಂತೆ ಆಪಾರ ಸಂಖ್ಯೆಯ ಅಭಿಮಾನಿಗಳನ್ನು ಕತ್ತಿ ಅಗಲಿದ್ದಾರೆ
ಮೂಲತಃ ಜ‌ನತ ಪರಿವಾರದವರಾದ ಕತ್ತಿ ಅವರು, ಬೆಳಗಾವಿ ಜಿಲ್ಲೆಯ ಪ್ರಭಾವಿ ನಾಯಕ.
ತಂದೆ ವಿಶ್ವನಾಥ್ ಕತ್ತಿ ಅವರು ನಿಧನರಾದ ವೇಳೆ  ಜನತದಳದ ಮೂಲಕ ರಾಜಕೀಯ ಪ್ರವೇಶ ಮಾಡಿದ್ದರು.ಹುಕ್ಕೇರಿ ವಿಧಾನಸಭೆ ಕ್ಷೇತ್ರದಿಂದ ಒಂದು ಬಾರಿ ಪರಭಾವಗೊಂಡಿದ್ದನ್ನು ಬಿಟ್ಟರೆ, ಆರು ಬಾರಿ ವಿಧಾನಸಭೆಗೆ ಆಯ್ಕೆಯಾಗಿದ್ದರು.
2008 ರಲ್ಲಿ ಜೆಡಿಎಸ್ ನಿಂದ ಗೆದ್ದಾಗ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಸಮ್ಮುಖದಲ್ಲಿ ಬಿಜೆಪಿಗೆ ಸೇರ್ಪಡೆಯಾಗಿದ್ದರು.
ಉತ್ತರ ಕರ್ನಾಟಕ ಅಭಿವೃದ್ಧಿಯಾಗದಿದ್ದರೆ ,ಪ್ರತ್ಯೇಕ ರಾಜ್ಯ ಬೇಕೆಂದು ಸರ್ಕಾರಗಳಿಗೆ ಎಚ್ಚರಿಕೆ ಕೊಡುತ್ತಿದ್ದರು.ಹಾಗಾಗಿ ಸಾಕಷ್ಟು ಬಾರಿ ಅವರು ವಿವಾದಕ್ಕೆ ಸಿಲುಕಿದ್ದರು
ಕಂಬನಿ: ಸಚಿವ ಉಮೇಶ್ ಕತ್ತಿ ಅವರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ,ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ,ಗೃಹ ಸಚಿವ ಅಮಿತ್ ಷಾ, ಪ್ರಹ್ಲಾದ್ ಜೋಶಿ, ರಾಜ್ಯಪಾಲ ತಾವರ್ ಚಂದ್ ಗೆಹ್ಲೋಟ್, ಮುಖ್ಯಮಂತ್ರಿ ಬಸವರಾಜ್ ಬೊಮ್ಮಯಿ, ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್ .ಯಡಿಯೂರಪ್ಪ, ಹೆಚ್.ಡಿ.ಕುಮಾರಸ್ವಾಮಿ,ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಬಿಜೆಪಿ ರಾಜ್ಯಧ್ಯಕ್ಷ ನಳೀನ್ ಕುಮಾರ್ ಕಟೀಲ್ ಸೇರಿದಂತೆ  ಅನೇಕ ಗಣ್ಯರು ಕಂಬನಿ ಮಿಡಿದಿದ್ದಾರೆ.