ಅನಧಿಕೃತ ಶಾಲೆಗಳ ವಿರುದ್ಧ ಕಾನೂನು ಕ್ರಮ

ಬೆಂಗಳೂರು: ರಾಜ್ಯ ಸರ್ಕಾರದಿಂದ ಅನುಮತಿ ಪಡೆಯದೆ ಅನಧಿಕೃತವಾಗಿ ನಡೆಯುತ್ತಿರುವ ಶಾಲೆಗಳ ವಿರುದ್ಧ ತಕ್ಷಣ ಕಾನೂನು ಕ್ರಮ ತೆಗೆದುಕೊಳ್ಳುವಂತೆ ಸಾರ್ವಜನಿಕ ಶಿಕ್ಷಣ ಇಲಾಖೆ ಸೂಚಿಸಿದೆ.
ಈ ಸಂಬಂಧ ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತರು ಸುತ್ತೋಲೆ ಹೊರಡಿಸಿದ್ದಾರೆ.
ಕರ್ನಾಟಕ ಶಿಕ್ಷಣ ಕಾಯ್ದೆ ಅಡಿ ನೋಂದಣಿ ಪಡೆಯದ ಶಾಲೆಗಳು ಹಾಗೂ ಶಾಲಾ ಮಾನ್ಯತೆಯನ್ನು 1 ವರ್ಷಕ್ಕಿಂತ ಹೆಚ್ಚು ನವೀಕರಣ ಮಾಡದಿರುವ ಶಾಲೆಗಳನ್ನು ಗುರುತಿಸುವಂತೆ ಆದೇಶಿಸಲಾಗಿದ
ತಾಲೂಕುಗಳಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳು ಹಾಗೂ ಜಿಲ್ಲೆಯಲ್ಲಿ ಡಿಡಿಪಿಐಗಳು ಅನಧಿಕೃತ ಶಾಲೆಗಳನ್ನ ಪಟ್ಟಿ ಮಾಡುವಂತೆ ಸೂಚಿಸಲಾಗಿದೆ.
ಪೂರ್ವಾನುಮತಿ ಇಲ್ಲದೆ ಸ್ಥಳಾಂತರ ಮಾಡಿದ ಶಾಲೆಗಳು, ಅನಧಿಕೃತವಾಗಿ ಬೇರೆಯವರಿಗೆ ಹಸ್ತಾಂತರ ಮಾಡಿದ ಶಾಲೆಗಳ ಮೇಲೂ ಸೂಕ್ತ ಕ್ರಮ ಜರುಗಿಸುವಂತೆ ಸುತ್ತೋಲೆಯಲ್ಲಿ ಸ್ಪಷ್ಟಪಡಿಸಲಾಗಿದೆ.
ಸರ್ಕಾರ ಅನುಮತಿ ನೀಡಿದ ಪಠ್ಯಕ್ರಮ ಬದಲಾಗಿ ಬೇರೆ ಪಠ್ಯ ಬೋಧನೆ ಮಾಡುವ ಶಾಲೆಗಳು,ಅನುಮತಿ ಪಡೆಯದೇ ಬೇರೊಂದು ಆಡಳಿತ ಮಂಡಳಿ ನಡೆಸುವುದರ ವಿರುದ್ಧವೂ ಕ್ರಮ ಜರುಗಿಸಲಾಗುತ್ತದೆ.
ಸರ್ಕಾರದ ನಿಯಮ ಪಾಲನೆ ಮಾಡದೇ ಇರುವ ಶಾಲೆಗಳಿಗೆ ಬೀಗ ಬೀಳುವುದು ಖಚಿತ.
ಕೆಲ ದಿನಗಳ ಹಿಂದೆ ಖಾಸಗಿ ಆಡಳಿತ ಮಂಡಳಿಯವರು ಶಿಕ್ಷಣ ಇಲಾಖೆಯಲ್ಲೂ 40 ಪರ್ಸೆಂಟ್ ಕಮಿಷನ್ ಆರೋಪ ಮಾಡಿದ್ದರು.