ಬೆಂಗಳೂರು: ಸಂಸದ ತೇಜಸ್ವಿ ಸೂರ್ಯ ವಿರುದ್ಧ ಟ್ವೀಟ್ ಮಾಡಿದ್ದ ಕಾಂಗ್ರೆಸ್‍ಗೆ ಬಿಜೆಪಿ ತಿರುಗೇಟು ನೀಡಿದೆ.
ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಓಣಂ ಊಟ ಸವಿದು ಅದರ ಫೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದರು.
ಇದನ್ನು ಮುಂದಿಟ್ಟುಕೊಂಡು ಬಿಜೆಪಿ ಟ್ವೀಟ್ ಮಾಡಿದೆ.ಜನರು ಸಂಕಷ್ಟದಲ್ಲಿರುವಾಗ ಜವಾಬ್ದಾರಿಯುತ ವಿಪಕ್ಷದ ರಾಜ್ಯ ಅಧ್ಯಕ್ಷನಾಗಿ ಬೆಂಗಳೂರಿನಲ್ಲೇ ಇರಬೇಕಾಗಿತ್ತು.
ಆದರೆ ಅವರು ಭಾರತ್ ಜೋಡೋ ಯಾತ್ರೆ, ಹಬ್ಬದೂಟದಲ್ಲಿ ತೊಡಗಿಕೊಂಡಿದ್ದರು.
ಅಪ್ರಬುದ್ಧ ಕೆಪಿಸಿಸಿ ಅಧ್ಯಕ್ಷ ಎನ್ನಬಹುದು ಆದರೆ, ನಾವು ಆ ಕೆಲಸ ಮಾಡುವುದಿಲ್ಲ ಎಂದು ಬಿಜೆಪಿ ವ್ಯಂಗ್ಯವಾಡಿದೆ
ಬೆಂಗಳೂರು ಮಳೆ, ಪ್ರವಾಹದಿಂದ ಸಂಕಷ್ಟಕ್ಕೆ ಸಿಲುಕಿದ್ದಾಗ ಸಂಸದ ತೇಜಸ್ವಿ ಸೂರ್ಯ ದೋಸೆ ಸವಿಯುತ್ತಿದ್ದರು.
ಮತಿ ದೋಷ ಇರುವವರನ್ನು ಆಯ್ಕೆ ಮಾಡಿದರೆ, ಜನ ಮುಳುಗುವಾಗ ದೋಸೆ ತಿನ್ನಲು ಹೋಗುತ್ತಾರೆ! ಎಂದು ಟೀಕಿಸಿತ್ತು.
ಬೆಂಗಳೂರು ಮುಳುಗಿದೆ, ಜನತೆ ಪರದಾಡುತ್ತಿದ್ದಾರೆ, ಆದರೆ ಬೆಂಗಳೂರು ದಕ್ಷಿಣದ ಸಂಸದ ತೇಜಸ್ವಿ ಸೂರ್ಯಗೆ ದೋಸೆ ತಿನ್ನುವ ಟೆಂಪ್ಟ್ ಆಗಿದ್ಯಂತೆ.
ಮಕ್ಕಳಾಟ ಆಡಿಕೊಂಡಿದ್ದ ಅಪ್ರಬುದ್ಧರನ್ನು ಸಂಸದರನ್ನಾಗಿಸಿದರೆ ಇನ್ನೇನು ನಿರೀಕ್ಷಿಸಲು ಸಾಧ್ಯ ಎಂದು ಪ್ರಶ್ನೆ ಮಾಡಿತ್ತು.
ಇದಕ್ಕೆ ಪ್ರತಿಯಾಗಿ ಬಿಜೆಪಿಯು ಡಿಕೆಶಿ ಓಣಂ ಊಟ ಸವಿಯುತ್ತಿದ್ದುದನ್ನು ಕೆಣಕಿ ಕಾಂಗ್ರೆಸ್ ಗೆ ಚಳಿ ಬಿಡಿಸಿದೆ.

