ಲಖೀಂಪುರ್‌ಖೇರಿ: ಉತ್ತರಪ್ರದೇಶದ ಲಖೀಂಪುರ್‌ಖೇರಿಯಲ್ಲಿ ಇಬ್ಬರು ಬಾಲಕಿಯರನ್ನು ಅಪಹರಿಸಿ ಅತ್ಯಾಚಾರ ಎಸಗಿ ಕೊಲೆ ಮಾಡಿರುವ ಹೇಯ ಘಟನೆ ನಡೆದಿದೆ.
ಸ್ಥಳೀಯರ ಆರೋಪದ ಹಿನ್ನೆಲೆಯಲ್ಲಿ ಪೊಲೀಸರು ಪ್ರಕರಣ ದಾಖಲಿಸಿ ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
ಲಖೀಂಪುರ್‌ಖೇರಿಯಲ್ಲಿ ಬಾಲಕಿಯರ ಮನೆಗೆ ನುಗ್ಗಿದ ಆರೋಪಿಗಳು ಮೋಟಾರ್‍ಸೈಕಲ್‍ನಲ್ಲಿ ಅಪಹರಿಸಿ ಅತ್ಯಾಚಾರವೆಸಗಿದ್ದಾರೆ.
ನಂತರ ಕೊಲೆ ಮಾಡಿ ಮನೆಯಿಂದ 1 ಕಿ.ಮೀ ದೂರದಲ್ಲಿರುವ ಕಬ್ಬಿನ ತೋಟದಲ್ಲಿ ಮರವೊಂದಕ್ಕೆ ನೇಣು ಹಾಕಿದ್ದಾರೆ ಎಂದು ಪೋಷಕರು ಆರೋಪಿಸಿದ್ದಾರೆ.
ಅಪ್ರಾಪ್ತ ದಲಿತ ಬಾಲಕಿಯರ ತಾಯಿ ನೀಡಿರುವ ದೂರು ಆಧರಿಸಿ ನಿಗಾಸನ್ ಠಾಣೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ಸ್ಥಳೀಯರು ಆರೋಪಿಗಳ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ಪ್ರತಿಭಟನೆ ನಡೆಸಿದ್ದಾರೆ.
ಪ್ರಕರಣ ಸಂಬಂಧ ಚೋಟು, ಸುಹಾಯಿಲ್, ಜುನೈಲ್, ಆರೀಫ್ ಸೇರಿದಂತೆ ಆರು ಮಂದಿ ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದೆ.
ಪೊಲೀಸರ ಕಾರ್ಯಚರಣೆ ವೇಳೆ ಆರೋಪಿಗಳು ಪ್ರತಿ ದಾಳಿ ನಡೆಸಿದ್ದಾರೆ.ಈ ವೇಳೆ ಪೊಲೀಸರು ಗುಂಡು ಹಾರಿಸಿದ್ದಾರೆ. ಇದರಲ್ಲಿ ಒಬ್ಬ ಗಾಯಗೊಂಡಿದ್ದಾನೆ.
ಮೃತ ಬಾಲಕಿಯರು ಚೋಟು ಅವರ ನೆರೆಯ ವಾಸಿಗಳು ಎಂದು ಹೇಳಲಾಗಿದೆ.
ಘಟನೆಯನ್ನು ಖಂಡಿಸಿರುವ ಪ್ರತಿಪಕ್ಷಗಳು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ಉತ್ತರಪ್ರದೇಶದಲ್ಲಿ ಮಹಿಳೆಯರಿಗೆ ರಕ್ಷಣೆ ಇಲ್ಲ ಎಂದು ಕಿಡಿಕಾರಿವೆ.

