ಮತಾಂತರ ನಿಷೇಧ ಕಾಯ್ದೆಯಿಂದ ಯಾರಿಗೂ ತೊಂದರೆ ಇಲ್ಲ -ಆರಗ ಜ್ಞಾನೇಂದ್ರ

ಬೆಂಗಳೂರು: ಮತಾಂತರ ನಿಷೇಧ ಕಾಯ್ದೆಯಿಂದ ಯಾವುದೇ ಧರ್ಮದವರಿಗೆ ತೊಂದರೆಯಾಗುವುದಿಲ್ಲ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ಸಮರ್ಥಿಸಿಕೊಂಡರು.
ಮಾಧ್ಯಮ ಪ್ರತಿ ನಿಧಿಗಳೊಂದಿಗೆ ಮಾತನಾಡಿದ ಅವರು,ಸೇವೆ ಹೆಸರಿನಲ್ಲಿ ಮತಾಂತರ ಮಾಡುವ ಪ್ರಕ್ರಿಯೆಗೆ ಕಡಿವಾಣ ಬೀಳಲಿದೆ ಎಂದು ತಿಳಿಸಿದರು.
ವಿಧಾನಪರಿಷತ್‍ನಲ್ಲಿ ಮತಾಂತರ ನಿಷೇಧ ಕಾಯ್ದೆಗೆ  ಒಪ್ಪಿಗೆ ಪಡೆಯಲಾಗಿದೆ. ಬೆಳಗಾವಿ ಅಧಿವೇಶನದಲ್ಲೂ ವಿಧಾನಸಭೆಯಲ್ಲಿ ಈ ವಿಧೇಯಕಕ್ಕೆ ಒಪ್ಪಿಗೆ ದೊರೆತಿತ್ತು ಎಂದು ಹೇಳಿದರು.
ಸುಗ್ರೀವಾಜ್ಞೆ ಮೂಲಕ ಕಾಯ್ದೆ ಜಾರಿಗೊಳಿಸಲಾಗಿತ್ತು. ಉಭಯ ಸದನಗಳ ಒಪ್ಪಿಗೆ ದೊರೆತಿದೆ ಎಂದು ತಿಳಿಸಿದರು.
ಅಲ್ಪಸಂಖ್ಯಾತರ ಓಲೈಕೆಯನ್ನು ಕಾಂಗ್ರೆಸ್ ಹಿಂದಿನಿಂದಲೂ ಮಾಡುತ್ತಾ ಬಂದಿದೆ. ಕಾಂಗ್ರೆಸ್‍ ನ ಮುಖವಾಡ ಕಳಚಿದಂತಾಗಿದೆ. ನಮ್ಮ ಸರ್ಕಾರ ಬಂದ ಮೇಲೆ ಗೋಹತ್ಯೆ ಮತ್ತು ಮತಾಂತರ ನಿಷೇಧ ಕಾಯ್ದೆಯನ್ನು ಜಾರಿಗೆ ತಂದಿದೆ ಎಂದು ತಿಳಿಸಿದರು.
ಮತಾಂತರದ ಮೂಲಕ ಧರ್ಮವನ್ನು ಒಡೆಯಲಾಗುತ್ತಿತ್ತು. ಹಿಂದೂ ಧರ್ಮಕ್ಕೂ ಧಕ್ಕೆಯಾಗುತ್ತಿದ್ದು, ಮತಾಂತರ ನಿಷೇಧ ಕಾಯ್ದೆಯಿಂದ ಬಲವಂತದ ಮತಾಂತರಕ್ಕೆ ಅವಕಾಶ ಇರುವುದಿಲ್ಲ ಎಂದರು.