ಶಿಲ್ಪಕಲಾ ಶಿಬಿರ ಉದ್ಘಾಟನೆ

ಮೈಸೂರಿನ ಕಲಾಮಂದಿರದಲ್ಲಿ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2022 ಲಲಿತಕಲೆ ಮತ್ತು ಕರಕುಶಲ ಉಪ ಸಮಿತಿ ವತಿಯಿಂದ ಆಯೋಜಿಸಲಾಗಿದ್ದ ಶಿಲ್ಪಕಲಾ ಶಿಬಿರವನ್ನು ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು ಉದ್ಘಾಟಿಸಿದರು. ಇದೇ ವೇಳೆ ಕರಪತ್ರಗಳನ್ನು ಬಿಡುಗಡೆ ಮಾಡಿದರು. 
ಈ ಸಂದರ್ಭದಲ್ಲಿ ಮೇಯರ್ ಶಿವಕುಮಾರ್, ಜಿಲ್ಲಾಧಿಕಾರಿ ಡಾ. ಬಗಾದಿ ಗೌತಮ್, ಶಿಲ್ಪಕಲಾ ಅಕಾಡೆಮಿ ಅಧ್ಯಕ್ಷರಾದ ವೀರಣ್ಣ ಅರ್ಕಸಾಲಿ ಸೇರಿದಂತೆ ನಾನಾ ನಿಗಮ ಮಂಡಳಿಗಳ ಅಧ್ಯಕ್ಷರು, ಮುಖಂಡರು ಉಪಸ್ಥಿತರಿದ್ದರು.