ಲೋಕಾಯುಕ್ತದಲ್ಲಿ ಬಿಎಸ್ ವೈ ವಿರುದ್ಧ ಎಫ್ಐಆರ್ ದಾಖಲು

ಬೆಂಗಳೂರು: ಕೋರ್ಟ್ ಸೂಚನೆಯಂತೆ‌ ಮಾಜಿ ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ‌ವಿರುದ್ದ 
ಲೋಕಾಯುಕ್ತ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ.
ಬಿ. ಎಸ್. ಯಡಿಯೂರಪ್ಪ ಸೇರಿ ಒಂಭತ್ತು ಜನರ ಮೇಲೆ ಬೆಂಗಳೂರು ಲೋಕಾಯುಕ್ತ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬಿ.ಎಸ್. ಯಡಿಯೂರಪ್ಪ‌ ಮತ್ತು ಅವರ ಪುತ್ರ ಬಿ.ವೈ. ವಿಜಯೇಂದ್ರ, ಶಶಿಧರ್ ಮರಡಿ, ಸಂಜಯ್, ಚಂದ್ರಕಾಂತ್ ರಾಮಲಿಂಗಂ, ಸಚಿವ ಎಸ್. ಟಿ. ಸೋಮಶೇಖರ್, ಜಿ. ಸಿ. ಪ್ರಕಾಶ್, ಕೆ. ರವಿ, ವಿರೂಪಾಕ್ಷಪ್ಪ ಯಮಕನಮರಡಿ ವಿರುದ್ಧ ಪ್ರಕರಣ ದಾಖಲು ಮಾಡಲಾಗಿದೆ.
ಬಿಡಿಎ ವಸತಿ ಯೋಜನೆ ಗುತ್ತಿಗೆ ನೀಡುವ ಸಲುವಾಗಿ ಮುಖ್ಯಮಂತ್ರಿಯಾಗಿದ್ದ ವೇಳೆ ಬಿ.ಎಸ್‌. ಯಡಿಯೂರಪ್ಪ ಅವರು ಭ್ರಷ್ಟಾಚಾರ ಎಸಗಿದ ಆರೋಪವಿದೆ.
ಈ ಬಗ್ಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಖಾಸಗಿ ದೂರನ್ನು  ಸಾಮಾಜಿಕ ಕಾರ್ಯಕರ್ತ ಟಿ. ಜೆ. ಅಬ್ರಾಹಂ ದಾಖಲಿಸಿದ್ದಾರೆ.
ಖಾಸಗಿ ದೂರಿನ ವಿಚಾರಣೆ ನಡೆಸಿ ತನಿಖೆಗೆ  ವಿಶೇಷ ನ್ಯಾಯಾಲಯ ಆದೇಶಿಸಿತ್ತು.
ಲೋಕಾಯುಕ್ತ ಪೊಲೀಸರಿಗೆ ತನಿಖೆಗೆ ಕೋರ್ಟ್ ಆದೇಶಿಸಿದೆ.
ಕೋರ್ಟ್ ಸೂಚನೆ ಮೇರೆಗೆ ಲೋಕಾಯುಕ್ತದಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಸಲು ಮುಂದಾಗಿದೆ.