ಬೆಂಗಳೂರು: ಸರ್ಕಾರಿ ಶಾಲೆಗಳಲ್ಲಿ ನೈತಿಕ ಶಿಕ್ಷಣ ಕಲಿಸುವ ನಿಟ್ಟಿನಲ್ಲಿ ಪಠ್ಯದಲ್ಲಿ ಭಗವದ್ಗೀತೆ ಬೋಧನೆ ಮಾಡುತ್ತೇವೆ ಎಂದು ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ತಿಳಿಸಿದ್ದಾರೆ.
ವಿಧಾನ ಪರಿಷತ್ ಕಲಾಪದಲ್ಲಿ ಬಿಜೆಪಿಯ ಪ್ರಾಣೇಶ್ ಹಾಗೂ ರವಿಕುಮಾರ್ ಪ್ರಶ್ನೆಗೆ ಉತ್ತರಿಸಿರುವ ಶಿಕ್ಷಣ ಸಚಿವ ಬಿ.ಸಿ.ನಾಗೇಶ್, ಶಾಲಾ ಪಠ್ಯ ಪುಸ್ತಕಗಳಲ್ಲಿ ಭಗವದ್ಗೀತೆ ಪ್ರತ್ಯೇಕವಾಗಿ ಬೋಧಿಸುವ ವಿಚಾರ ಸರ್ಕಾರದ ಮುಂದೆ ಇಲ್ಲ ಎಂದು ಹೇಳಿದ್ದಾರೆ.
ಆದರೆ ನೈತಿಕ ಶಿಕ್ಷಣದಲ್ಲಿ ಭಗವದ್ಗೀತೆ ಸೇರ್ಪಡೆ ಮಾಡುತ್ತೇವೆ. ಇದಕ್ಕಾಗಿ ಒಂದು ಸಮಿತಿ ರಚನೆ ಮಾಡುತ್ತೇವೆ. ಡಿಸೆಂಬರ್ ವೇಳೆಗೆ ಶಾಲೆಗಳಲ್ಲಿ ನೈತಿಕ ಶಿಕ್ಷಣ ಜಾರಿಗೆ ತರುತ್ತೇವೆ ಎಂದು ತಿಳಿಸಿದ್ದಾರೆ.
ಶಾಲಾ ಪಠ್ಯಪುಸ್ತಕದಲ್ಲಿ ಭಗದ್ಗೀತೆ ಬೋಧಿಸುವ ಪ್ರಸ್ತಾಪ ಇಲ್ಲ ಅಂತ ಸರ್ಕಾರ ಹೇಳುತ್ತಿದೆ. ಹಿಂದೆ ಸರ್ಕಾರ ಭಗದ್ಗೀತೆ ಬೋಧನೆ ಮಾಡಲು ಸಮಿತಿ ರಚನೆ ಮಾಡುವುದಾಗಿ ಹೇಳಿತ್ತು. ಸರ್ಕಾರಕ್ಕೆ ಭಗವದ್ಗೀತೆ ಬೋಧಿಸಲು ಮುಜುಗರ ಇದೆಯಾ ಎಂದು ಪ್ರಾಣೇಶ್ ಪ್ರಶ್ನಿಸಿದರು
ಮೊದಲು ಇದ್ದ ಆಸಕ್ತಿ ಇದ್ದಕ್ಕಿದ್ದಂತೆ ಈಗ ಯಾಕಿಲ್ಲ ಅಂತ ಪ್ರಶ್ನೆ ಮಾಡಿದರು.
ಇದಕ್ಕೆ ಉತ್ತರ ನೀಡಿದ ಸಚಿವರು, ಪಠ್ಯದಲ್ಲಿ ಸೇರ್ಪಡೆ ಇಲ್ಲ ಅಂತ ಹೇಳಿದ್ದೇವೆ. ನೈತಿಕ ಶಿಕ್ಷಣದಲ್ಲಿ ಭಗವದ್ಗೀತೆ ಸೇರ್ಪಡೆ ಮಾಡುತ್ತೇವೆ ಎಂದು ಸ್ಪಷ್ಟಪಡಿಸಿದರು.
ಡಿಸೆಂಬರ್ ವೇಳೆಗೆ ನೈತಿಕ ಶಿಕ್ಷಣ ಪ್ರಾರಂಭ ಮಾಡುತ್ತೇವೆ. ಇತಿಹಾಸದ ತಪ್ಪುಗಳನ್ನು ಪಠ್ಯದಲ್ಲಿ ಸರಿ ಮಾಡುವ ಕೆಲಸ ಮಾಡುತ್ತಿದ್ದೇವೆ ಎಂದು ಸಚಿವರು ತಿಳಿಸಿದ್ದಾರೆ.

