ಶ್ರಮಿಕ ಕಲ್ಯಾಣಕ್ಕೆ ಪ್ರಾಶಸ್ತ್ಯ -ಬೊಮ್ಮಾಯಿ

ಬೆಂಗಳೂರು: ಕಾರ್ಮಿಕರ ಕಲ್ಯಾಣಕ್ಕೆ ಪ್ರಥಮ ಪ್ರಾಶಸ್ತ್ಯ ನೀಡುವುದೇ ನಮ್ಮ ಸರ್ಕಾರದ ಮೊದಲ ಉದ್ದೇಶ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದರು.

ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ನಲ್ಲಿ ಕಾರ್ಮಿಕ ಇಲಾಖೆಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ಆಯೋಜಿಸಿದ್ದ ಸಮಾರಂಭದಲ್ಲಿ ಸಿಎಂ ಮಾತನಾಡಿದರು.

ಕಾರ್ಮಿಕ ವರ್ಗಕ್ಕೆ ಸಮಯಕ್ಕೆ ಸರಿಯಾಗಿ ಸವಲತ್ತುಗಳನ್ನು ನೀಡುವ ಮೂಲಕ ಅವರ ಶ್ರಮಕ್ಕೆ ಬೆಲೆ ಕೊಡುವ ಕೆಲಸ ಮಾಡಲಾಗುತ್ತಿದೆ ಎಂದು ತಿಳಿಸಿದರು.

ದೇಶದ ಪ್ರಗತಿಯಲ್ಲಿ ಕಾರ್ಮಿಕರ ಪಾತ್ರ ಹಿರಿದು. ಎಷ್ಟೇ ಹಣ ಮಂಜೂರು ಮಾಡಿದರೂ ಬಿಸಿಲಿನಲ್ಲಿ ಕೆಲಸ ಮಾಡಿ ರಸ್ತೆ ನಿರ್ಮಾಣದಂತಹ ಕಾಮಗಾರಿಗಳನ್ನು ಮಾಡುವುದು ಕಾರ್ಮಿಕರು.

ಕಾರ್ಮಿಕರಿಗೆ ಬದುಕಿನ ಭರವಸೆ ಮೂಡಿಸಬೇಕು. ಕಾರ್ಮಿಕರಿಗೆ ತಮ್ಮ ಕುಟುಂಬ ಮತ್ತು ಮಕ್ಕಳ ಭವಿಷ್ಯ ಸದೃಢ ಎನಿಸಬೇಕು. ಅದಕ್ಕೆ ಸಮಾಜ, ಸರ್ಕಾರ ಮತ್ತು ಖಾಸಗಿ ಕೈಗಾರಿಕೆಗಳು ಮುಂದಾಗಬೇಕು ಮನವಿ ಮಾಡಿದರು.

ಶ್ರಮಿಕನಿಗೆ ಸ್ಥಿರತೆ ನೀಡಿದಾಗ ಉತ್ತಮ ಕೆಲಸ ಆಗಲಿದೆ. ನಿಟ್ಟಿನಲ್ಲಿ ಕಾರ್ಯಕ್ರಮಗಳನ್ನು ರೂಪಿಸಿ ಕಾರ್ಮಿಕ ನಿಧಿಯಿಂದ ಯೋಜನೆಗಳನ್ನು ಜಾರಿ ಮಾಡಲಾಗುತ್ತಿದೆ ಎಂದು ತಿಳಿಸಿದರು.

ರೈತರುಕಾರ್ಮಿಕರುಸೈನಿಕರು ಬಹಳ ಮುಖ್ಯವಾಗಿದ್ದಾರೆ. ಹಿನ್ನೆಲೆಯಲ್ಲಿ ಮೊಬೈಲ್ ಕ್ಲಿನಿಕ್, ಕಾರ್ಮಿಕ ಮಕ್ಕಳ ಉನ್ನತ ಶಿಕ್ಷಣಕ್ಕೆ ತರಬೇತಿ, ಮನೆ ಕಟ್ಟಲು ಸಹಾಯ ಸೇರಿದಂತೆ ಹತ್ತು ಹಲವು ಯೋಜನೆಗಳನ್ನು ಅನುಷ್ಠಾನ ಮಾಡಲಾಗಿದೆ ಎಂದು ಸಿಎಂ ಹೇಳಿದರು.

ರಾಜ್ಯದ ಎಲ್ಲ ಕಟ್ಟಡ ಕಾರ್ಮಿಕರಿಗೂ  ಉಚಿತ ಬಸ್ ಪಾಸ್ ಸೇವೆ ದೊರಕಿಸಿಕೊಡುವಂತೆ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.

ಇದೇ ವೇಳೆ ಬೊಮ್ಮಾಯಿ ಕಾರ್ಮಿಕ ಇಲಾಖೆಯ ಪ್ರತ್ಯೇಕ ವೆಬ್ಸೈಟ್, ರಾಜ್ಯದಾದ್ಯಂತ ಕಟ್ಟಡ ಕಾರ್ಮಿಕರು ಕೆಎಸ್ಆರ್ಟಿಸಿ ಬಸ್ಗಳಲ್ಲಿ ಸಂಚರಿಸಲು ಉಚಿತ ಬಸ್ ಪಾಸ್ ಮತ್ತು ಶೈಕ್ಷಣಿಕವಾಗಿ ಸಾಧನೆಗೈದಿರುವ ಕಾರ್ಮಿಕರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಯೋಜನೆಗಳಿಗೆ ಚಾಲನೆ ನೀಡಿದರು.

ಕಾರ್ಮಿಕ ಸಚಿವ ಶಿವರಾಂ ಹೆಬ್ಬಾರ್ ಮಾತನಾಡಿ, ರಾಜ್ಯದ ಶ್ರಮಿಕ ವರ್ಗದ ಬಹು ದಿನಗಳಿಂದ ಬಾಕಿ ಉಳಿದಿದ್ದ ಸವಲತ್ತುಗಳ ಅರ್ಜಿಗಳನ್ನು ಒಂದೇ ಬಾರಿಗೆ ಇತ್ಯರ್ಥ ಪಡಿಸುವ ಸಲುವಾಗಿ ಕಾರ್ಮಿಕ ಅದಾಲತ್ಗಳನ್ನು ನಡೆಸಲಾಗಿದೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಬೃಹತ್ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ, ಕೆಎಸ್ಆರ್ಟಿಸಿ ಅಧ್ಯಕ್ಷ ಕೆ. ಚಂದ್ರಪ್ಪ, ಕಾರ್ಮಿಕ ಇಲಾಖೆ ಕಾರ್ಯದರ್ಶಿ ಮನೋಜ್ ಜೈನ್, ಇಲಾಖೆ ಆಯುಕ್ತ ಅಕ್ರಂ ಪಾಷ ಮತ್ತಿತರರು ಹಾಜರಿದ್ದರು.