ಶಿವಮೊಗ್ಗ: ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ಭ್ರಷ್ಟಾಚಾರ ಆರೋಪ ಮಾಡಿ ಪೇ ಸಿಎಂ ಅಭಿಯಾನ ನಡೆಸುತ್ತಿರುವ ಕಾಂಗ್ರೆಸ್ ವಿರುದ್ಧ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಕಿಡಿ ಕಾರಿದ್ದಾರೆ.
ಶಿವಮೊಗ್ಗದಲ್ಲಿ ಮಾಧ್ಯಮ ಪ್ರತಿ ನಿಧಿಗಳೊಂದಿಗೆ ಮಾತನಾಡಿದ ಬಿಎಸ್ ವೈ, ಡಿ.ಕೆ. ಶಿವಕುಮಾರ್ ಮತ್ತು ಸಿದ್ಧರಾಮಯ್ಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಡಿಕೆಶಿ ಮತ್ತು ಸಿದ್ಧರಾಮಯ್ಯ ಪೋಸ್ಟರ್ ಅಂಟಿಸಿದ್ದಾರೆ. ಅವರ ವಿರುದ್ಧ ಕೇಸ ಹಾಕಲಿ. ಪೊಸ್ಟರ್ ಅಂಟಿಸೋದು ಕಾಂಗ್ರೆಸ್ ಗೆ ಶೋಭೆ ತರುವುದಿಲ್ಲ ಎಂದು ಕಿಡಿಕಾರಿದರು.
ಪಿಎಫ್ ಐ ಮುಖಂಡರ ಮೇಲೆ ಪೊಲೀಸ್ ದಾಳಿ ಕುರಿತು ಪ್ರತಿಕ್ರಿಯಿಸಿದ ರಾಜ್ಯಾದ್ಯಂತ 40ಕ್ಕೂ ಹೆಚ್ಚು ಕಡೆ ದಾಳಿ ನಡೆಸಲಾಗಿದೆ. ಪಿಎಫ್ ಐ ಮುಖಂಡರನ್ನ ವಶಕ್ಕೆ ಪಡೆಯಲಾಗಿದೆ ಎಂದು ತಿಳಿಸಿದರು.
ಪಿಎಫ್ ಐ ವಿರುದ್ಧ ಕೇಂದ್ರ ಕ್ರಮ ಕೈಗೊಂಡಿದೆ. ಮೊದಲೇ ಪಿಎಫ್ ಐ ನಿಷೇಧಿಸಬೇಕಿತ್ತು ಎಂದು ಅಭಿಪ್ರಾಯ ಪಟ್ಟ ಯಡಿಯೂರಪ್ಪ, ತನಿಖೆ ಮಾಡಿದರೆ ದೇಶದ್ರೋಹಿ ಕೆಲಸ ಬಯಲಾಗುತ್ತದೆ ಎಂದು ಹೇಳಿದರು.

