ಮೈಸೂರು: ಆರ್ ಎಸ್ ಎಸ್ ನವರು ದೇಶದ್ರೋಹಿ ಕೆಲಸ ಮಾಡುತ್ತಿದ್ದಾರಾ,ಅದನ್ನು ಏಕೆ ಬ್ಯಾನ್ ಮಾಡಬೇಕು ಎಂದು ಸಚಿವ ಎಸ್.ಟಿ.ಸೋಮಶೇಖರ್ ಪ್ರಶ್ನಿಸಿದ್ದಾರೆ.
ಮೈಸೂರಿನಲ್ಲಿ ಗುರುವಾರ ಮಾದ್ಯಮ ಪ್ರತಿ ನಿಧಿಗಳೊಂದಿಗೆ ಪ್ರತಿಕ್ರಿಯಿಸಿದ ಅವರು ಸಿದ್ದರಾಮಯ್ಯನವರಿಗೆ ಏನು ಮಾತನಾಡುತ್ತಿದ್ದೇನೆ ಅಂತಾನೆ ಗೊತ್ತಿಲ್ಲ ಎಂದು ಟೀಕಿಸಿದರು.
ಆರ್ ಎಸ್ ಎಸ್ ನಿಷೇಧಿಸುವ ಅವಶ್ಯಕತೆ ಏನಿದೆ,ಪಿಎಫ್ ಐ ದೇಶದ್ರೋಹಿ ಕೆಲಸ ಮಾಡುತ್ತಿದೆ.ಅದಕ್ಕೆ ಮಾಹಿತಿ ಸಂಗ್ರಹಿಸಿ ಬ್ಯಾನ್ ಮಾಡಿದ್ದಾರೆ ಎಂದು ಹೇಳಿದರು.
ಪಿಎಫ್‌ಐ ಭಾರತಾದ್ಯಂತ ನಿಷೇಧಿಸಬೇಕೆಂಬುದು ಪ್ರತಿಯೊಬ್ಬರ ಆಶಯಗಿತ್ತು. ಅದಕ್ಕಾಗಿ ನಿಷೇಧಿಸಲಾಗಿದೆ.
ಆದರೆ ಆರ್ ಎಸ್ ನಿಷೇಧಿಸುವ ಅಗತ್ಯವೇನಿದೆ. ಆರ್ ಎಸ್ ಎಸ್ ದೇಶಭಕ್ತಿ ಕೆಲಸ ಮಾಡುತ್ತಿದೆ ತಿರುಗೇಟು ನೀಡಿದರು.
ಸಿದ್ದರಾಮಯ್ಯನವರು ಯಾಕೆ ಹಾಗೆ ಹೇಳುತ್ತಿದ್ದಾರೆ ಗೊತ್ತಿಲ್ಲ ಎಂದರು.
ಪಿಎಫ್‌ಐ ದೇಶದ್ರೋಹಿ ಕೆಲಸ ಮಾಡಿದ್ದರ ಬಗ್ಗೆ ಮಾಹಿತಿ ಸಂಗ್ರಹಿಸಿ ಕೇಂದ್ರ ಸರ್ಕಾರ ಐತಿಹಾಸಿಕ ತೀರ್ಮಾನ ತೆಗೆದುಕೊಂಡಿದೆ ಎಂದು ತಿಳಿಸಿದರು.
ಚುನಾವಣೆ ಗಿಮಿಕ್ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿ ಚುನಾವಣೆಗೂ ಅದಕ್ಕೂ ಸಂಬಂಧವಿಲ್ಲ.ಚುನಾವಣೆಗೆ ಇನ್ನೂ ತುಂಬಾ ದಿನಗಳಿವೆ.
ತುಂಬಾ ದಿನಗಳ ಹಿಂದೆಯೇ ನಿಷೇಧಿಸಬೇಕೆಂಬ ಪ್ರಸ್ತಾಪವಿತ್ತು. ಈಗ ಕಾಲ ಕೂಡಿ ಬಂದಿದೆ.ಬಲವಾದ ಸಾಕ್ಷಿಗಳು ಸಿಕ್ಕಿರುವುದರಿಂದ ಆ ಸಂಘಟನೆಯನ್ನು ನಿಷೇಧಿಸಲಾಗಿದೆ ಎಂದು ಸೋಮಶೇಖರ್ ತಿಳಿಸಿದರು.

