ವಿರೋಧ ಪಕ್ಷದ ನಾಯಕ ಸ್ಥಾನಕ್ಕೆ ಖರ್ಗೆ ರಾಜೀನಾಮೆ

ನವದೆಹಲಿ: ಮಲ್ಲಿಕಾರ್ಜುನ ಖರ್ಗೆ ಅವರು ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದ ನಂತರ ಖರ್ಗೆ ರಾಜೀನಾಮೆ‌ ಪತ್ರ

ಸಲ್ಲಿಸಿದರು.

ರಾಜಿನಾಮೆ ನೀಡಿದ ನಂತರ ಖರ್ಗೆ ಮಾಧ್ಯಮ ಪ್ರತಿ ನಿಧಿಗಳೊಂದಿಗೆ ಪ್ರತಿಕ್ರಿಯಿಸಿ  ಕಾಂಗ್ರೆಸ್ ನ ಒಂದೇ ಹುದ್ದೆಯ ನಿಯಮದಡಿಯಲ್ಲಿ ನಾನು ರಾಜೀನಾಮೆ ಸಲ್ಲಿಸಿದ್ದೇನೆ ಎಂದು ಹೇಳಿದರು.

ರಾಜೀನಾಮೆ ಪತ್ರವನ್ನು ಕಾಂಗ್ರೆಸ್ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಖರ್ಗರ ಕಳುಹಿಸಿದ್ದಾರೆ.

ಉದಯಪುರದಲ್ಲಿ ನಡೆದ ಕಾಂಗ್ರೆಸ್‌ ನ ಚಿಂತನ ಶಿಬಿರದಲ್ಲಿ ಯಾವುದೇ ವ್ಯಕ್ತಿ ಪಕ್ಷದಲ್ಲಿ ಎರಡು ಹುದ್ದೆಗಳನ್ನು ಅಲಂಕರಿಸುವಂತಿಲ್ಲ ಎಂದು ನಿರ್ಧರಿಸಲಾಗಿದೆ.

ಎರಡನೇ ಹುದ್ದೆಗೆ ಮುನ್ನ ಯಾವುದೇ ಕಾಂಗ್ರೆಸ್ ನಾಯಕರು ತಮ್ಮ ಪ್ರಸ್ತುತ ಹುದ್ದೆಗೆ ರಾಜೀನಾಮೆ ನೀಡಬೇಕಾಗುತ್ತದೆ ಹಾಗಾಗಿ ಖರ್ಗೆ ರಾಜೀನಾಮೆ ನೀಡಿದ್ದಾರೆ.