ಎಂಜಿನಿಯರಿಂಗ್ ಶಿಕ್ಷಣದಲ್ಲಿ ಸಮಗ್ರ ಸುಧಾರಣೆ -ಡಾ.ಅಶ್ವಥ್ ನಾರಾಯಣ

ಬೆಂಗಳೂರು: ಡಿಸೆಂಬರ್ ವೇಳೆಗೆ ಎಂಜಿನಿಯರಿಂಗ್ ಶಿಕ್ಷಣದಲ್ಲಿ ಸಮಗ್ರ ಸುಧಾರಣೆ ತರಲಾಗುವುದು‌ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ ಎನ್ ಅಶ್ವತ್ಥನಾರಾಯಣ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಖಾಸಗಿ ಕಾಲೇಜಿನಲ್ಲಿ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಈ ಪ್ರಕ್ರಿಯೆ ಈಗ ಅಂತಿಮ ರೂಪದಲ್ಲಿದೆ ಎಂದು ತಿಳಿಸಿದ್ದಾರೆ.

ಸದ್ಯಕ್ಕೆ ರಾಜ್ಯದಲ್ಲಿ ಸರಕಾರಿ ಕಾಲೇಜುಗಳಲ್ಲಿ ಕಲಿಕೆ ಮತ್ತು ಬೋಧನೆಯ ಡಿಜಿಟಲೀಕರಣ ನಡೆಯುತ್ತಿದೆ. ಇದನ್ನು ಸದ್ಯದಲ್ಲೇ ಖಾಸಗಿ ಕಾಲೇಜುಗಳಿಗೂ ವಿಸ್ತರಿಸಲಾಗುವುದು ಎಂದರು.

ರಾಜ್ಯದಲ್ಲಿ ಉನ್ನತ ಶಿಕ್ಷಣ ವಲಯದಲ್ಲಿ ಅತಿ ಹೆಚ್ಚು ಸುಧಾರಣೆಗಳನ್ನು ತರಲಾಗುತ್ತಿದೆ. ಈಗ ನಮ್ಮ ಉನ್ನತ ಶಿಕ್ಷಣ ಸಂಸ್ಥೆಗಳನ್ನು ಉದ್ಯಮಗಳ ಜತೆ ಬೆಸೆಯಲಾಗಿದೆ.

ಈ ಮೂಲಕ ವಿದ್ಯಾರ್ಥಿಗಳಲ್ಲಿ ಉದ್ಯಮಶೀಲತೆಯನ್ನು ಬೆಳೆಸಲಾಗುತ್ತಿದೆ ಎಂದು ಹೇಳಿದರು.

ಎಂಜಿನಿಯರಿಂಗ್ ಶಿಕ್ಷಣದ ಆಡಳಿತ, ಪಠ್ಯಕ್ರಮ, ಇಂಟರ್ನ್ ಶಿಪ್ ಇತ್ಯಾದಿಗಳನ್ನು ಆಮೂಲಾಗ್ರವಾಗಿ ಸುಧಾರಿಸಲಾಗುವುದು.

ಇಂಟರ್ನ್ ಶಿಪ್ ಅವಧಿಯಲ್ಲಿ ವಿದ್ಯಾರ್ಥಿಗಳಿಗೆ ವೇತನ ಕೊಡುವುದನ್ನು ಕಡ್ಡಾಯ ಮಾಡಲಾಗಿದೆ ಎಂದು ಅಶ್ವಥ್ ನಾರಾಯಣ ಹೇಳಿದರು.

ಗುಣಮಟ್ಟದ ಶಿಕ್ಷಣದಿಂದ ಮಾತ್ರ ಸಮಾಜದ ಸಬಲೀಕರಣ ಸಾಧ್ಯ,ಜಾಗತಿಕ ಸ್ತರದಲ್ಲಿ ಸ್ಪರ್ಧೆಯನ್ನು ಎದುರಿಸುವಂತಹ ಗುರಿಯನ್ನು ಹೊಂದುವುದು ಅತ್ಯಗತ್ಯವಾಗಿದೆ ತಿಳಿಸಿದರು