ಭಾರತ್ ಜೋಡೋ ಯಾತ್ರೆಗೆ ಮಹತ್ವವಿಲ್ಲ -ಬೊಮ್ಮಾಯಿ ಟೀಕೆ

ಬೆಂಗಳೂರು: ಕಾಂಗ್ರೆಸ್ ಹಮ್ಮಿಕೊಂಡಿರುವ ಭಾರತ್ ಜೋಡೋ ಯಾತ್ರೆಗೆ ಯಾವುದೇ ಮಹತ್ವವಿಲ್ಲ ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಟೀಕಿಸಿದರು.
ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿ ನಿಧಿಗಳೊಂದಿಗೆ ಮಾತನಾಡಿದ ಸಿಎಂ, ಭಾರತ್ ಜೋಡೋ ಯಾತ್ರೆ ಬಗ್ಗೆ ನಾವು ತಲೆ ಕೆಡಿಸಿಕೊಂಡಿಲ್ಲ ಎಂದು ಸ್ಪಷ್ಟಪಡಿಸಿದರು.
ಈ ಭಾರತ್ ಜೋಡೋ ಯಾತ್ರೆ ಯಾರನ್ನು ಜೋಡಿಸುತ್ತಿದೆ, ಯಾರನ್ನು ಒಡೆಯುತ್ತಿದೆ ಎಂದು ಜಗತ್ತಿಗೆ ತಿಳಿದಿದೆ ಅದಕ್ಕೆ ಯಾವ ಮಹತ್ವವೂ ಉಳಿದಿಲ್ಲ ಎಂದು ವ್ಯಂಗ್ಯವಾಡಿದರು.
ನಮ್ಮ ಕೆಲಸ ಹಾಗೂ ಸರ್ಕಾರದ ಕಾರ್ಯಕ್ರಮಗಳನ್ನು ಜನರಿಗೆ ತಿಳಿಸಿ ಚುನಾವಣೆ ಗೆಲ್ಲುವ ಪ್ರಯತ್ನ ಮಾಡುತ್ತಿದ್ದೇವೆ. ಅದಕ್ಕೂ ಜನಸಂಕಲ್ಪ ಯಾತ್ರೆಗೂ ಯಾತ್ರೆಗೂ ಸಂಬಂಧವಿಲ್ಲ  ಎಂದು ಸಿಎಂ ಹೇಳಿದರು.
ಬಿಜೆಪಿ  2023 ರ ಚುನಾವಣೆಯಲ್ಲಿ ವಿಜಯ ಸಾಧಿಸಲಿದೆ ಎಂದು ಇದೇ ವೇಳೆ  ಬೊಮ್ಮಾಯಿ ವಿಶ್ವಾಸ ವ್ಯಕ್ತಪಡಿಸಿದರು. 
ಬಿಜೆಪಿ ನಿರಂತರವಾಗಿ ಕಾರ್ಯಕ್ರಮಗಳನ್ನು ಮಾಡಿಕೊಂಡಿ ಬಂದಿದೆ ಎಂದು ಹೇಳಿದರು.
ರಾಜ್ಯದಲ್ಲಿ ನಮ್ಮ ಸರ್ಕಾರ ಮಾಡಿರುವ ಕಾರ್ಯಕ್ರಮಗಳು, ನೀತಿಗಳು ಮತ್ತು ಕೇಂದ್ರ ಸರ್ಕಾರದ ಕಾರ್ಯಕ್ರಮಗಳಿಂದಾಗಿ  ಒಂದೊಂದು ಕ್ಷೇತ್ರದಲ್ಲೂ ಸಾವಿರಾರು ಜನರಿಗೆ ಅನುಕೂಲವಾಗಿದೆ.
ಇದನ್ನು ಜನರಿಗೆ ತಿಳಿಹೇಳಿ ಯಾವ ರೀತಿ  ಲಾಭಪಡೆಯಬೇಕೆಂಬುದನ್ನು  ತಿಳಿಸಿಕೊಡಲಾಗುವುದು ಎಂದು ತಿಳಿಸಿದರು. 

ಜನಸಂಕಲ್ಪ ಯಾತ್ರೆ ಮೂಲಕ  ಜನರ ವಿಶ್ವಾಸವನ್ನು ಗಳಿಸಿಸಲಾಗುವುದು, ಎಲ್ಲೆಡೆ ಬಹಳಷ್ಟು ಉತ್ಸಾಹವಿದೆ ಎಂದು ಬೊಮ್ಮಾಯಿ ಹೇಳಿದರು.