ಬೆಂಗಳೂರು: ವಿಧ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಯ ಹಿತ ದೃಷ್ಟಿಯಿಂದ ರಾಜ್ಯದ ಶಾಲೆ- ಕಾಲೇಜುಗಳಲ್ಲಿ ಸಮವಸ್ತ್ರ ಸಂಹಿತೆಯನ್ನು ಜಾರಿಗೊಳಿಸಿದ್ದು, ಇದರಲ್ಲಿ ಯಾವುದೇ ಬದಲಾವಣೆ ಇಲ್ಲ ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದರು.
ಮಾಧ್ಯಮ ಪ್ರತಿ ನಿಧಿಗಳೊಂದಿಗೆ ಮಾತನಾಡಿದ ಅವರು, ಇದರ ಬಗ್ಗೆ ನಮ್ಮ ನಿಲುವಿನಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಸ್ಪಷ್ಟಪಡಿಸಿದರು.
ಹಿಜಾಬ್ ವಿಷಯಕ್ಕೆ ಸಂಬಂಧಿಸಿದಂತೆ ಸರ್ವೋಚ್ಚ ನ್ಯಾಯಾಲಯದ ದ್ವಿ ಸದಸ್ಯ ಪೀಠದಿಂದ ವಿಭಿನ್ನ ತೀರ್ಪು ಹೊರ ಬಂದಿದೆ.
ಹಾಗಾಗಿ ವಿವಾದ ವಿಸ್ತೃತ ಪೀಠಕ್ಕೆ ವರ್ಗಾವಣೆ ಯಾಗುವ ಸಾಧ್ಯತೆ ಇದೆ.
ತೀರ್ಪಿನ ಕುರಿತು ಕಾನೂನು ತಜ್ಞರ ಸಲಹೆ ಪಡೆದು ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಆರಗ ಜ್ಞಾನೇಂದ್ರ ಹೇಳಿದರು .

