ಬೆಂಗಳೂರು: ಹಿಂದುಪರ ಸಂಘಟನೆಗಳು ರಾಜ್ಯಾದ್ಯಂತ ಹಲಾಲ್ ಉತ್ಪನ್ನಗಳನ್ನು ಬಹಿಷ್ಕರಿಸಬೇಕೆಂದು ಅಭಿಯಾನ ನಡೆಸುತ್ತಿದ್ದು ರಾಜ್ಯ ಸರ್ಕಾರಕ್ಕೆ ತಲೆನೋವಾಗಿದೆ.
ಈಗಾಗಲೇ ಕೆಲ ಕಾರಣಗಳಿಂದ ಸೂಕ್ಷ್ಮ ಮತ್ತು ಅತಿಸೂಕ್ಷ್ಮ ಪ್ರದೇಶಗಳಲ್ಲಿ ಎರಡು ಕೋಮುಗಳ ನಡುವೆ ಸಂಘರ್ಷ ಉಂಟಾಗಿದೆ.
ಈ ಸಂದರ್ಭದಲ್ಲೇ ಹಿಂದೂಪರ ಸಂಘಟನೆಗಳ ಹಲಾಲ್ ವಿರುದ್ಧದ ಅಭಿಯಾನ ಸರ್ಕಾರಕ್ಕೆ ನುಂಗಲಾರದ ತುತ್ತಾಗಿದೆ.
ಜನರಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ಪ್ರತಿ ಜಿಲ್ಲೆಯಲ್ಲೂ ಹಲಾಲ್ ಉತ್ಪನ್ನಗಳ ವಿರುದ್ಧ ಅಭಿಯಾನ ಕೈಗೊಳ್ಳಬೇಕು ಎಂದು ತೀರ್ಮಾನಿಸಿವೆ.
ಹಲಾಲ್ ಉತ್ಪನ್ನಗಳ ಮಾರಾಟದಿಂದ ದೇಶದಲ್ಲಿ ಹಿಂದೂ ವ್ಯಾಪಾರಿಗಳಿಂದ ಸಾವಿರಾರು ಕೋಟಿ ರೂ.ಗಳ ವಹಿವಾಟು ನಡೆಯುತ್ತಿದೆ. ಇದನ್ನು ತಪ್ಪಿಸಬೇಕು ಎಂದು ಸಭೆಯಲ್ಲಿ ನಿರ್ಧರಿಸಲಾಗಿದೆ.
ಕೆಲವು ತಿಂಗಳುಗಳ ಹಿಂದೆ ರಾಜ್ಯಾದ್ಯಂತ ಆವರಿಸಿದ್ದ ಹಲಾಲ್ ಕಿಚ್ಚು ಮತ್ತೆ ಆವರಿಸಿದೆ. ಹಲಾಲ್ ಎಂದು ಪ್ರಮಾಣೀಕೃತಗೊಂಡಿರುವ ಉತ್ಪನ್ನಗಳನ್ನು ಹಿಂದೂಗಳು ಕೊಳ್ಳಬಾರದು. ಅಂಥ ಉತ್ಪನ್ನಗಳನ್ನು ಬಹಿಷ್ಕರಿಸಬೇಕು ಎಂದು ಹಿಂದೂ ಸಂಘಟನೆಗಳು ಕರೆ ನೀಡಿವೆ.
ರಾಜಧಾನಿ ಬೆಂಗಳೂರು, ದಕ್ಷಿಣ ಕನ್ನಡ, ಉಡುಪಿ, ಉತ್ತರಕನ್ನಡ, ಹುಬ್ಬಳ್ಳಿ-ಧಾರಾವಾಡ, ಶಿವಮೊಗ್ಗ, ದಾವಣಗೆರೆ, ತುಮಕೂರು, ಮೈಸೂರು, ರಾಮನಗರ ಸೇರಿದಂತೆ ಬಹುತೇಕ ಎಲ್ಲ ಜಿಲ್ಲೆಗಳಲ್ಲೂ ಹಿಂದೂಪರ ಸಂಘಟನೆಗಳು ಅಭಿಯಾನವನ್ನು ಆರಂಭಿಸಿದೆ.
ಹಬ್ಬಕ್ಕೂ ಮುನ್ನವೇ ಮುಸ್ಲಿಮರ ಅಂಗಡಿಗಳಲ್ಲಿ ಹಲಾಲ್ ಮಾಂಸ ಖರೀದಿಸಬೇಡಿ ಎಂಬ ಹಿಂದೂಪರ ಸಂಘಟನೆಗಳ ಅಭಿಯಾಕ್ಕೆ ಕೆಲ ಮುಸ್ಲಿಂ ಮುಖಂಡರುಗಳು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.ಹಲಾಲ್ ಉತ್ಪನ್ನಗಳ ಮಾರಾಟದ ಮೂಲಕ ಸಂಗ್ರಹಿಸಲಾಗುವ ಕೋಟ್ಯಂತರ ರೂಪಗಳನ್ನು ಮುಸ್ಲಿಂ ರಾಷ್ಟ್ರಗಳು ಉಗ್ರವಾದಕ್ಕೆ ಬಳಸುತ್ತಿವೆ ಎಂದು ಹಿಂದೂ ಪರ ವಿಚಾರವಾದಿ ಚಕ್ರವರ್ತಿ ಸೂಲಿಬೆಲೆ ಆರೋಪಿಸಿದ್ದಾರೆ.

