ಮೈಸೂರು: ಜೆ ಡಿ ಎಸ್ ಪಕ್ಷ ಬೆಳೆದು ಬದುಕಿರುವುದು ರೈತರು ಹಾಗೂ ದೀನ ದಲಿತರಿಗಾಗಿ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.
ಮೈಸೂರಿನಲ್ಲಿ ಹಮ್ಮಿಕೊಂಡಿರುವ ರಾಜ್ಯ ಮಟ್ಟದ ಜೆಡಿಎಸ್ ಕಾರ್ಯಗಾರದಲ್ಲಿ ಮಾತನಾಡಿದ ಅವರು,ತಳ ಸಮುದಾಯದರಿಗೂ ರಾಜಕೀಯ ಮೀಸಲಾತಿ ದೊರಕಿಸಿಕೊಟ್ಟಿರುವುದು ದೇವೇಗೌಡರು ಮಾತ್ರ ಎಂದು ತಿಳಿಸಿದರು.
ಈಗಲೂ ಬಹಳಷ್ಟು ಜನರು ಇದರ ಉಪಯೋಗ ಪಡೆಯುತ್ತಿದ್ದಾರೆ ಎಂದು ಎಚ್ ಡಿ ಕೆ ಹೇಳಿದರು.
ಮುಂಬೈ ಕರ್ನಾಟಕ ಮತ್ತು ಹೊಸ ಕರ್ನಾಟಕದಿಂದ ಕನಿಷ್ಠ 35 ಸ್ಥಾನ ಗೆಲ್ಲುತ್ತೇವೆ
ಎಂದು ಕುಮಾರಸ್ವಾಮಿ ವಿಶ್ವಾಸ ವ್ಯಕ್ತಪಡಿಸಿದರು.
ಚುನಾವಣಾ ಪ್ರಚಾರಕ್ಕೆ ಸಾಗಲು ವಾಹನ ಸಿದ್ದವಾಗಿದೆಯಾ ಎಂಬುದಾಗಿ ನಮ್ಮ ಕಾರ್ಯಕರ್ತರು ಉತ್ಸಾಹದಿಂದ ಕೇಳುತ್ತಿದ್ದಾರೆ.
ಸ್ವತಂತ್ರ ಸರ್ಕಾರ ರಚನೆ ಮಾಡಬೇಕು ಎಂಬುವುದು ಎಲ್ಲರ ಬಯಕೆ, ಅವರ ಕನಸು ನನಸು ಮಾಡಬೇಕು ಎಂಬುದೇ ನಮ್ಮ ಗುರಿ ಎಂದು ಎಚ್ ಡಿ ಕೆ ತಿಳಿಸಿದರು.

